ಚಿತ್ರದುರ್ಗ: ಹಿರಿಯೂರು ತಾಲೂಕಿನ ಕರಿಯಾಲ ಗ್ರಾಮ ಪಂಚಾಯತ್ ನಲ್ಲಿ ಪಿಡಿಓ ವರ್ತನೆಗೆ ಬೇಸತ್ತು ಗ್ರಾಮ ಪಂಚಾಯತ್ ಸದಸ್ಯರು ಸಾಮೂಹಿಕ ರಾಜೀನಾಮೆ ನೀಡಿದ ಪ್ರಸಂಗ ನಡೆದಿದೆ.
ಪಿಡಿಓ ಚಂದ್ರಕಲಾ ಕರ್ತವ್ಯಕ್ಕೂ ಬರುತ್ತಿಲ್ಲ, ಜನರ ಕೈಗೂ ಸಿಗುತ್ತಿಲ್ಲ ಎಂದು ಮನನೊಂದು ರಾಜಿನಾಮೆ ನೀಡಿದ್ದಾರೆ.
ಕುಡಿಯುವ ನೀರಿನ ಸಮಸ್ಯೆ ನಿವಾರಿಸುವಲ್ಲಿ ಪಿಡಿಓ ವಿಫಲರಾಗಿದ್ದಾರೆ ಎಂದು ಪಂಚಾಯತ್ ಸದಸ್ಯರು ಆರೋಪಿಸಿದ್ದಾರೆ. ಉಪಾಧ್ಯಕ್ಷರು ಸೇರಿ ಒಟ್ಟು 11 ಸದಸ್ಯರು ಸಾಮೂಹಿಕ ರಾಜಿನಾಮೆ ಕೊಟ್ಟಿದ್ದಾರೆ.