
ಕಡಬ: ದ್ವಿತೀಯ ಪಿಯುಸಿ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮೂವರು ವಿಧ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ನಡೆಸಿದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಕೇರಳದ ಮಲಪ್ಪುರಂ ಜಿಲ್ಲೆಯ ನೆಲಂಬೂರು ತಾಲೂಕಿನ ಎಂ.ಬಿ.ಎ. ವಿದ್ಯಾರ್ಥಿ ಅಬೀನ್ (23ವ) ಎಂದು ಗುರುತಿಸಲಾಗಿದೆ.



ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುತ್ತಿದ್ದು, ಕಾಲೇಜಿಗೆ ಬೇರೆ ಬೇರೆ ಕಾಲೇಜುಗಳಿಂದ ವಿದ್ಯಾರ್ಥಿಗಳು ಬಂದಿದ್ದು ಈತ ಕೂಡ ಕಾಲೇಜಿಗೆ ಸಮವಸ್ತ್ರದಲ್ಲಿ ಬಂದು ಕಾದು ಕುಳಿತ್ತಿದ್ದ, ಇದೇ ವೇಳೆ ಅಲೀನಾ ಸಿಬಿ ಎಂಬಾಕೆ ಮೇಲೆ ಆ್ಯಸಿಡ್ ದಾಳಿ ಮಾಡಿದ್ದಾನೆ. ಆಕೆಯ ಪಕ್ಕದಲ್ಲೇ ಕುಳಿತಿದ್ದ ಅರ್ಚನಾ ಮತ್ತು ಅಮೃತ ಆ್ಯಸಿಡ್ ದಾಳಿಗೆ ಒಳಗಾಗಿದ್ದಾರೆ.
ರಾತ್ರಿಯೇ ಕೇರಳದಿಂದ ಬಂದಿದ್ದ ಯುವಕ ದೂರದ ಸಂಬಂಧಿ ಅಲೀನಾ ಸಿಬಿ ಎಂಬಾಕೆಯನ್ನು ಎರಡು ವರ್ಷದಿಂದ ಪ್ರೀತಿಸುತ್ತಿದ್ದ ಎನ್ನಲಾಗಿದ್ದು, ಪ್ರೀತಿ ನಿರಾಕರಿಸಿದ ಹಿನ್ನಲೆಯಲ್ಲಿ ಈ ಆ್ಯಸಿಡ್ ದಾಳಿ ಮಾಡಿದ್ದಾನೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಡಿ ವೈ ಎಸ್ ಪಿ ಅರುಣ್ ನಾಗೇಗೌಡ, ಪುತ್ತೂರು ಉಪ ವಿಭಾಗಾಧಿಕಾರಿ ಜೊಬಿನ್ ಮಹಾಪಾತ್ರ ಸ್ಥಳಕ್ಕೆ ಭೇಟಿ ನೀಡಿದ್ದಾರೆ.