August 30, 2025
WhatsApp Image 2024-03-07 at 3.16.29 PM
ಉಡುಪಿ ಜಿಲ್ಲೆಯ ಪಡುಬಿದ್ರಿ ಕಂಚಿನಡ್ಕ ನಿವಾಸಿ, ಕೇರಳ ಮೂಲದ ಆರೋಪಿ ರಾಜೀವ್ 30ಗ್ರಾಂ ಗೋಲ್ಡ್ ನ ಚಿನ್ನಾಭರಣಗಳನ್ನು ಸ್ಥಳೀಯವಾಗಿ ಬ್ಯಾಂಕು, ಸೊಸೈಟಿಗಳಲ್ಲಿ ಅಡವಿಟ್ಟು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣವನ್ನು ಪಡುಬಿದ್ರಿ ಪಿಎಸ್‌ಐ ಪ್ರಸನ್ನ ಹಾಗೂ ಸಿಬ್ಬಂಧಿಗಳು ಬೇಧಿಸಿದ್ದಾರೆ ಎಂದು ತಿಳಿದು ಬಂದಿದೆ ‌
ರಾಜೀವ್‌ನಿಗೆ ಸಹಕರಿಸಿದ ಆರೋಪಿಗಳಾದ ಕುಮುಟಾದ ನಿತಿಲ್ ಭಾಸ್ಕರ್ ಶೇಟ್, ಸಂಜಯ್ ಶೇಟ್, ಮತ್ತು ಸಂತೋಷ್ ಶೇಟ್, ಹಾಗೂ ಬೆಳಗಾವಿಯ ಕೈಲಾಸ್ ಗೋರಾಡ, ಎಂಬವರನ್ನು ಬಂಧಿಸಿದ ಘಟನೆ ನಡೆದಿದೆ ‌
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಆವರನ್ನು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಆರೋಪಿಗಳಿಂದ ನಕಲಿ 916 ಹಾಲ್‌ಮಾರ್ಕ್ ಸೀಲ್ ಹಾಕಲು ಬಳಸಲಾಗುತ್ತಿದ್ದ ಸುಮಾರು 3.5 ಲಕ್ಷ ರೂ. ಮೌಲ್ಯದ ಮೆಷಿನ್ ಕಂಪ್ಯೂಟರ್‌ಗಳನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ರಾಜೀವ್ 30 ಗ್ರಾಂ ಗೋಲ್ಡ್ ಬಳಸಿ 20 ಗ್ರಾಂ ಚಿನ್ನಾಭರಣದೊಂದಿಗೆ ಗಲ್ ರಾಷ್ಟ್ರಕ್ಕೆ ಹೋಗುವ ಮತ್ತು ಅಲ್ಲಿಂದ ವಾಪಾಸಾಗುವ ವೇಳೆ 20 ಗ್ರಾಂ ಶುದ್ಧ ಚಿನ್ನದಾಭರಣವನ್ನೇ ಹಾಕಿಕೊಂಡು ಬರುವ ತನ್ನ ಪ್ಲಾನ್‌ಗೆ ಸಹಕರಿಸಲು ಪ್ರಕರಣದ ಇತರ ಆರೋಪಿಗಳಾದ ನಿತಿಲ್ ಭಾಸ್ಕರ್ ಶೇಟ್‌ನನ್ನು ಬಳಸಿಕೊಂಡಿದ್ದ. ಕುಮುಟಾದ ಇನ್ನಿಬ್ಬರು ಆರೋಪಿಗಳಿಂದ ನಕಲಿ ಚಿನ್ನದ ಆಭರಣಗಳನ್ನು ತಯಾರಿಸಿಕೊಂಡು ಬೆಳಗಾವಿಯಲ್ಲಿ ನಕಲಿ ಹಾಲ್‌ಮಾರ್ಕ್ ಮೊಹರನ್ನು ಹಾಕಲಾಗುತ್ತಿತ್ತು. ಆದರೆ ಆರೋಪಿ ರಾಜೀವ್ ತನ್ನ ಖತರ್‌ನಾಕ್ ಐಡಿಯಾವನ್ನು ಬದಲಾಯಿಸಿ, ಸ್ಥಳೀಯವಾಗಿ ಸೊಸೈಟಿ ಸಂಸ್ಥೆಗಳಿಗೆ ವಂಚನೆ ಮಾಡಲು ಶುರುವಿಟ್ಟು ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.
ಬ್ಯಾಂಕು, ಸೊಸೈಟಿಗಳಲ್ಲಿ ಚಿನ್ನಾಭರಣ ಈಡಿನ ಸಾಲವನ್ನಿತ್ತು ಮರಳಿ ಬಾರದೇ ಇದ್ದಾಗ ಏಲಂ ಪ್ರಕ್ರಿಯೆ ನಡೆಸಿ ಇದರಲ್ಲೂ ನಕಲಿ ಅಸಲಿಗಳನ್ನು ಪತ್ತೆ ಮಾಡಲಾಗಿರಲಿಲ್ಲ. ಕೇವಲ ಉಡುಪಿಯ ಬಿಡ್ಡುದಾರರೊಬ್ಬರು ಇದನ್ನು ಕತ್ತರಿಸಿ ಪರಿಶೀಲಿಸಿದಾಗ ಆರೋಪಿ ರಾಜೀವ್ ಮತ್ತು ಆತನ ಪತ್ನಿಯ ಚಿನ್ನಾಭರಣ ಸಾಲದ ವಂಚನೆ ಪ್ರಕರಣವು ಬೆಳಕಿಗೆ ಬಂತು. ವಿವಿಧ ಬ್ಯಾಂಕ್ ಗಳಲ್ಲಿ ಒಟ್ಟು 29.94 ಲಕ್ಷ ರೂ. ಗಳನ್ನು ರಾಜೀವ್ ದಂಪತಿ ಪಡೆದಿದ್ದರು.
ಪೊಲೀಸರು ಬಂಧಿತ ಆರೋಪಿಗಳ ವಿಚಾರಣೆ ನಡೆಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅರುಣ್ ಕುಮಾರ್, ಉಪ-ಅಧೀಕ್ಷಕ ಸಿದ್ಧಲಿಂಗಪ್ಪ, ಕಾರ್ಕಳ ಡಿವೈಎಸ್ಪಿ ಅರವಿಂದ ಕಲಗುಜ್ಜಿ ಹಾಗೂ ಕಾಪು ವೃತ್ತ ನಿರೀಕ್ಷಕಿ ಜಯಶ್ರೀ ಮಾನೆ ಅವರ ನಿರ್ದೇಶನದಂತೆ ಪಡುಬಿದ್ರಿ ಪಿಎಸ್‌ಐ ಪ್ರಸನ್ನ ಎಂ. ಎಸ್. ಹಾಗೂ  ಸಿಬಂಧಿಗಳು ಅರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

About The Author

Leave a Reply