ಬೆಂಗಳೂರು : ರಂಜಾನ್ ಮಾಹೆಯಲ್ಲಿ ರಾಜ್ಯದ ಉರ್ದು ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಾಲಾ ಅವಧಿ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಸುತ್ತೋಲೆಯಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಚಟುವಟಿಕೆಗಳ ಕ್ರಿಯಾ ಯೋಜನೆ ಅನುಷ್ಠಾನಗೊಳಿಸುವ ಬಗ್ಗೆ ನಿರ್ದೇಶನವಿರುತ್ತದೆ. ಅದರಂತೆ ಶಾಲೆಗಳ ದೈನಂದಿನ ಶೈಕ್ಷಣಿಕ ಚಟುವಟಿಕೆಗಳ ನಿರ್ವಹಣೆಗೆ ಸಲಹಾತ್ಮಕ ವೇಳಾ ಪಟ್ಟಿಯಲ್ಲಿ ಬೆಳಗ್ಗೆ 10.00 ಗಂಟೆಯಿಂದ ಸಂಜೆ 4.20ರವರೆಗೆ ಶಾಲಾ ಅವಧಿ ನಿಗದಿಪಡಿಸಲಾಗಿರುತ್ತದೆ. ಉಲ್ಲೇಖಿತ-2ರ ಸರ್ಕಾರದ ಪತ್ರದಲ್ಲಿ ರಂಜಾನ್ ಮಾಸದ ಪ್ರಯುಕ್ತ ರಾಜ್ಯದಲ್ಲಿನ ಉರ್ದು ಮಾಧ್ಯಮದ ಕಿರಿಯ, ಹಿರಿಯ ಮತ್ತು ಪ್ರೌಢಶಾಲೆಗಳನ್ನು ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 12.45 ರವರೆಗೆ ರಂಜಾನ್ ತಿಂಗಳು ಪ್ರಾರಂಭವಾದ ದಿನಾಂಕದಿಂದ ಒಂದು ತಿಂಗಳವರೆಗೆ ಮಾತ್ರ ನಡೆಸಲು ಸೂಚಿಸಲಾಗಿದೆ.