August 30, 2025
WhatsApp Image 2024-03-08 at 9.16.40 AM

ವಿಟ್ಲ: ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ಕಳ್ಳತನ ಪ್ರಕರಣವಾಗಿ ತಿಂಗಳಾಗುತ್ತ ಬಂದಿದ್ದು, ಪೊಲೀಸರು ತನಿಖೆಯಲ್ಲಿ ಪ್ರಗತಿಯನ್ನು ಸಾಧಿಸಿದ್ದು, ಈಗಾಗಲೇ ನಾಲ್ವರು ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಈ ನಡುವೆ ದರೋಡೆಕೋರರು ದರೋಡೆಗೈದ ಕೋಟ್ಯಾಂತರ ರೂ. ಮೌಲ್ಯದ ಚಿನ್ನಾಭರಣವನ್ನು ಪತ್ತೆ ಮಾಡಲಾಗಿದೆ.

ಕೇರಳದ ಪೈವಳಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಯಾರ್ ಸಜಂಕಿಲ ಎಂಬಲ್ಲಿ ಹೂತಿಟ್ಟಿದ್ದ ಏಳು ಕೆಜಿ ಚಿನ್ನಾಭರಣ ಪತ್ತೆಯಾಗಿದೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಂಡ ಕರ್ನಾಟಕ ಪೊಲೀಸರಿಗೆ ಚಿನ್ನವನ್ನು ಹೂತಿಟ್ಟಿರುವುದು ಪತ್ತೆಯಾಗಿದೆ. ಅಡ್ಯಡ್ಕದಲ್ಲಿರುವ ಬ್ಯಾಂಕ್‌ನಿಂದ 4,20,70,000 ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ದೋಚುವುದು ಇದರ ಉದ್ದೇಶ ಎಂದು ಪೊಲೀಸರು ಶಂಕಿಸಿದ್ದಾರೆ. ಕಳೆದ ತಿಂಗಳು 7ರಂದು ನಡೆದಿದ್ದ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ವಿಶೇಷ ಪೊಲೀಸ್ ತಂಡವು ಕಾಸರಗೋಡಿನ ನಾಲ್ವರನ್ನು ಬಾಯಾರಿನ ಒಬ್ಬ ಸೇರಿದಂತೆ ನಾಲ್ವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿತ್ತು. ಅವರಿಂದ ಬಂದ ಮಾಹಿತಿ ಮೇರೆಗೆ ಪೊಲೀಸರು ಸಜಿಂಕಿಲಾಗೆ ಆಗಮಿಸಿ ಚಿನ್ನವನ್ನು ಅಗೆದಿದ್ದಾರೆ ಎಂದು ವರದಿಯಾಗಿದೆ. ಸದ್ಯದಲ್ಲೇ ಈ ಕುರಿತು ಹೆಚ್ಚಿನ ಮಾಹಿತಿ ಹೊರಬೀಳಲಿದೆ ಎಂದು ಸೂಚಿಸಲಾಗಿದೆ.

About The Author

Leave a Reply