ಮಂಗಳೂರಿಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಒಂದರ ಬ್ರೇಕ್ ಫೇಲ್ ಆಗಿದ್ದು, ಚಾಲಕನ ಸಮಯಪ್ರಜ್ಞೆಯಿಂದ 70 ಪ್ರಯಾಣಿಕರ ಜೀವವನ್ನು ಉಳಿಸಿದ ಘಟನೆ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ.
ಶುಕ್ರವಾರ ಬೆಳಗ್ಗೆ ಕಡೂರಿನಿಂದ ಮಂಗಳೂರಿಗೆ ಬರುತ್ತಿದ್ದ ಈ ಕೆಎಸ್ಸಾರ್ಟಿಸಿ ಬಸ್ ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಬ್ರೇಕ್ ವೈಫಲ್ಯಕ್ಕೀಡಾಗಿದೆ. ಇದನ್ನು ಅರಿತ ಚಾಲಕ ಸಮಯಪ್ರಜ್ಞೆ ಮೆರೆದಿದ್ದು, ರಸ್ತೆಬದಿಯ ಡಿವೈಡರ್ ಗೆ ಢಿಕ್ಕಿ ಹೊಡೆಸಿ ಬಸ್ಸನ್ನು ನಿಲ್ಲುವಂತೆ ಮಾಡಿದ್ದಾನೆ .
ರಸ್ತೆ ಬದಿಯ ಡಿವೈಡರ್ ಗೆ ಢಿಕ್ಕಿ ಹೊಡೆದು ಬಸ್ ನಿಂತಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯಗಳಿಲ್ಲದೆ ಪಾರಾಗಿದ್ದಾರೆ. ಅತ್ಯಂತ ಅಪಾಯಕಾರಿ ತಿರುವುಗಳಿಂದ ಕೂಡಿರುವ ಚಾರ್ಮಾಡಿ ಘಾಟಿಯಲ್ಲಿ ಅಪಾಯಕಾರಿ ಸ್ಥಿತಿಯಲ್ಲಿ ಚಾಲಕ ತೋರಿದ ಸಮಯಪ್ರಜ್ಞೆ ಪ್ರಯಾಣಿಕರ ಜೀವ ಉಳಿಸಿದೆ.