Visitors have accessed this post 238 times.
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಕೇಂದ್ರ ಸರ್ಕಾರ ಗೃಹ ಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆಯಲ್ಲಿ 100 ರೂ. ಕಡಿತಗೊಳಿಸಿ ಮಹಿಳೆಯರಿಗೆ ಸಿಹಿ ಸುದ್ದಿ ನೀಡಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರಮೋದಿ, ಇಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ನಮ್ಮ ಸರ್ಕಾರವು ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 100 ರೂಪಾಯಿ ಇಳಿಕೆ ಮಾಡಿದೆ.
ಇದು ದೇಶಾದ್ಯಂತ ಅನ್ವಯವಾಗಲಿದ್ದು, ಲಕ್ಷಾಂತರ ಕುಟುಂಬಗಳ ಮೇಲಿನ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ. ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡುತ್ತದೆ ಎಂದಿದ್ದಾರೆ. ಅಡುಗೆ ಅನಿಲವನ್ನು ಹೆಚ್ಚು ಕೈಗೆಟುಕುವಂತೆ ಮಾಡುವ ಮೂಲಕ, ನಾವು ಕುಟುಂಬಗಳ ಯೋಗಕ್ಷೇಮ ಹಾಗೂ ಆರೋಗ್ಯಕರ ವಾತಾವರಣವನ್ನು ಖಚಿತಪಡಿಸಿಕೊಳ್ಳಲು ಗುರಿ ಹೊಂದಿದ್ದೇವೆ. ಇದು ಮಹಿಳೆಯರನ್ನು ಸಬಲೀಕರಣಗೊಳಿಸುವ ಮತ್ತು ಅವರಿಗೆ ಸುಲಭವಾಗಿ ಬದುಕುವ ಖಾತ್ರಿಪಡಿಸುವ ನಮ್ಮ ಬದ್ಧತೆಗೆ ಅನುಗುಣವಾಗಿದೆ ಎಂದು ತಿಳಿಸಿದ್ದಾರೆ.