Visitors have accessed this post 745 times.

ಮುಡಿಪು : ವಿದೇಶಕ್ಕೆ ತೆರಳಬೇಕಾದ ವ್ಯಕ್ತಿ ಕಾರು ಡಿಕ್ಕಿ ಹೊಡೆದು ಸಾವು!

Visitors have accessed this post 745 times.

ಮುಡಿಪು : ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದು ಪಾದಚಾರಿ ಇಹಲೋಕ ತ್ಯಜಿಸಿರುವ ಘಟನೆ ಮುಡಿಪು ಜಂಕ್ಷನ್ ನಲ್ಲಿ ಶುಕ್ರವಾರ ಮಧ್ಯಾಹ್ನದ ವೇಳೆ ಸಂಭವಿಸಿದೆ. ಬಂಟ್ವಾಳ ಕರೋಪಾಡಿ ನಿವಾಸಿ ಸಿದ್ದಿಖ್ (48) ಮೃತಪಟ್ಟವರು.

ಗಲ್ಫ್ ರಾಷ್ಟ್ರದಲ್ಲಿ ಉದ್ಯೋಗದಲ್ಲಿದ್ದ ಅವರು ಎರಡು ತಿಂಗಳ ಹಿಂದೆಯಷ್ಟೇ ಊರಿಗೆ ಬಂದಿದ್ದರು. ಸದ್ಯ ದೇರಳಕಟ್ಟೆ ಫ್ಲಾಟ್ ನಲ್ಲಿ ನೆಲೆಸಿರುವ ಸಿದ್ದೀಖ್ ಶುಕ್ರವಾರದ ಜುಮಾ ನಮಾಝ್ ಅನ್ನು ಕರೋಪಾಡಿ ಮಸೀದಿಯಲ್ಲಿ ನಡೆಸಿದ್ದರು. ಅಲ್ಲಿಂದ ವಾಪಾಸು ದೇರಳಕಟ್ಟೆಗೆ ಬರುವ ದಾರಿಮಧ್ಯೆ ಮುಡಿಪು ಜಂಕ್ಷನ್ ನಲ್ಲಿ ಇಳಿದು, ಎಟಿಎಂನಲ್ಲಿ ಹಣ ಡ್ರಾ ಮಾಡಿದ್ದಾರೆ. ಅಲ್ಲಿಂದ ಬಳಿಕ ರಸ್ತೆ ದಾಟಿ ಬಸ್ಸನ್ನೇರಲು ಹೊರಟಾಗ ಮಂಗಳೂರು ಕಡೆಗೆ ಚಲಿಸುತ್ತಿದ್ದ ಸೂರಜ್ ನಾಥ್ ಎಂಬವರು ಚಲಾಯಿಸುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಸಿದ್ದೀಖ್ ತಲೆಗೆ ಗಂಭೀರವಾಗಿ ಗಾಯವಾಗಿದ್ದು, ಅವರನ್ನು ನಾಟೆಕಲ್ ಕಣಚೂರು ಆಸ್ಪತ್ರೆಗೆ ದಾಖಲಿಸುವ ದಾರಿಮಧ್ಯೆ ಅವರು ಇಹಲೋಕ ತ್ಯಜಿಸಿದ್ದಾರೆ. ಸಿದ್ದೀಖ್ ಮುಂದಿನ ವಾರದಲ್ಲಿ ಮತ್ತೆ ಉದ್ಯೋಗ ನಿಮಿತ್ತ ಗಲ್ಫ್ ರಾಷ್ಟ್ರಕ್ಕೆ ಮರಳುವವರಿದ್ದರು. ಸಿದ್ದೀಕ್ ತಂದೆ, ತಾಯಿ, ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2022ರ ಡಿ.27 ರಂದು ಪಜೀರು ಸೇನೆರೆಬೈಲು ನಿವಾಸಿ ಕಾರ್ತಿಕ್ (12) ಎಂಬ ಬಾಲಕ ಮೃತಪಟ್ಟಿದ್ದ. ಮುಡಿಪು ಜ್ಯೂನಿಯರ್ ಕಾಲೇಜು ಎದುರುಗಡೆ ರಸ್ತೆ ದಾಟುವ ಸಂದರ್ಭ ಅಪಘಾತ ಸಂಭವಿಸಿತ್ತು. ಇದೀಗ ಮತ್ತೆ ಅದೇ ಸ್ಥಳದಲ್ಲಿ ಅಪಘಾತ ಸಂಭವಿಸಿದೆ. ಮುಡಿಪು ಭಾಗದಲ್ಲಿ ಫುಟ್‍ಪಾತ್ ಅನ್ನು ಅಂಗಡಿ ಮಾಲೀಕರು ಅಕ್ರಮಿಸಿದ್ದು, ಹೀಗಾಗಿ ಪಾದಚಾರಿಗಳು ರಸ್ತೆ ಮಧ್ಯೆ ನಡೆದುಕೊಂಡು ಹೋಗುವಂತಹ ಸ್ಥಿತಿಯಿದ್ದು, ಇದರಿಂದಾಗಿ ಅಪಘಾತಗಳು ನಿರಂತರವಾಗಿ ಸಂಭವಿಸುತ್ತಿವೆ ಅನ್ನುವ ಆರೋಪ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ.

Leave a Reply

Your email address will not be published. Required fields are marked *