November 8, 2025
WhatsApp Image 2024-03-11 at 11.36.54 AM

ಉಳ್ಳಾಲ: ವ್ಯಕ್ತಿಯೋರ್ವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕುಂಪಲದ, ಕುಜುಮ ಗದ್ದೆಯ ಒಂಟಿ ಮನೆಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಕುಂಪಲ, ಕುಜುಮ ಗದ್ದೆ ನಿವಾಸಿ ಕಿರಣ್ ಕುಮಾರ್ (48) ಎಂದು ಗುರುತಿಸಲಾಗಿದೆ. ಕಿರಣ್ ವಿವಾಹಿತರಾಗಿದ್ದು 17 ವರ್ಷಗಳಾದರೂ ಮಕ್ಕಳಾಗಿರಲಿಲ್ಲ. ಇದೇ ಕೊರಗಿಂದ ಕಿರಣ್ ವಿಪರೀತ ಮದ್ಯ ಸೇವಿಸಿ ಪತ್ನಿಯಲ್ಲಿ ಜಗಳ ಮಾಡುತ್ತಿದ್ದ ಎನ್ನಲಾಗಿದ್ದು ಗಂಡನ ನಡವಳಿಕೆಯಿಂದ ಬೇಸತ್ತ ಪತ್ನಿ ಕಳೆದ ನಾಲ್ಕು ವರ್ಷಗಳ ಹಿಂದೆಯೇ ಗಂಡನ ತೊರೆದು ತವರು ಸೇರಿದ್ದರು. ಇದರ ಬಳಿಕ ಒಬ್ಬಂಟಿಯಾಗಿ ಮನೆಯಲ್ಲಿ ನೆಲೆಸಿದ್ದ ಕಿರಣ್ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಹೌಸ್ ಕೀಪಿಂಗ್‌ ಕೆಲಸ ನಿರ್ವಹಿಸುತ್ತಿದ್ದರು. ಮನೆ ಸೇರಿದ್ದ ಕಿರಣ್ ಮತ್ತೆ ಹೊರ ಬಂದಿರಲಿಲ್ಲ. ಪರಿಸರದ ವಾಸನೆ ಬರುತ್ತಿದ್ದು, ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರ ಸಮಕ್ಷಮದಲ್ಲಿ ಸ್ಥಳೀಯ ಪುರಸಭಾ ಸದಸ್ಯ ದೀಪಕ್ ಪಿಲಾರ್ ಮನೆ ಬಾಗಿಲು ಮುರಿದಾಗ ಮನೆ ಛಾವಣಿಗೆ ನೇಣುಬಿಗಿದ ಸ್ಥಿತಿಯಲ್ಲಿ ಕಿರಣ್ ಅವರ ಕೊಳೆತ ಶವ ಪತ್ತೆಯಾಗಿದೆ. ಉಳ್ಳಾಲ ಪೊಲೀಸರು ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾಣಿಸಿದ್ದಾರೆ.

About The Author

Leave a Reply