ವಿಟ್ಲ: ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣ-ಮೂವರ ಬಂಧನ

ವಿಟ್ಲ: ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ದರೋಡೆ ಪ್ರಕರಣ ಭೇದಿಸುವಲ್ಲಿ ಪೊಲೀಸರ ವಿಶೇಷ ತಂಡ ಮಹತ್ತರ ಯಶಸ್ಸು ಸಾಧಿಸಿದ್ದು ಪ್ರಮುಖ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಆರೋಪಿಗಳಾದ  ಮೂಲತಃ ಸುಳ್ಯದ ಕೊಯಿಲ, ಕಾಸರಗೋಡಿನ ಚೌಕಿ ನಿವಾಸಿ ಖಲಂದರ್‌, ಬಾಯಾರು ನಿವಾಸಿ ದಯಾನಂದ ಹಾಗೂ ರಫೀಕ್‌ ಯಾನೆ ಗೂಡಿನ ಬಳಿ ರಫೀಕ್‌  ಎಂದು ಗುರುತಿಸಲಾಗಿದೆ.

ಫೆಬ್ರವರಿ 7 ರಂದು ರಾತ್ರಿ ಬ್ಯಾಂಕ್ ಕಟ್ಟಡದ ಹಿಂಬದಿ ಕಿಟಕಿಯ ಸರಳುಗಳನ್ನು ತುಂಡರಿಸಿ ಒಳನುಗ್ಗಿದ ಖದೀಮರು ಕೋಟ್ಯಾಂತರ ಮೌಲ್ಯದ ಚಿನ್ನಾಭರಣ ಹಾಗೂ ಹದಿನಾರು ಲಕ್ಷಕ್ಕೂ ಅಧಿಕ ಮೊತ್ತದ ನಗದು ಹಣ ದರೋಡೆಗೈದಿದ್ದರು. ಓಟ್ಟು ಐವರು ಆರೋಪಿಗಳಲ್ಲಿ ಮೂವರನ್ನು ಬಂಧಿಸಿದ್ದು, ಇಬ್ಬರು ಆರೋಪಿಗಳಾದ ವಿಜೇಶ್ ಮತ್ತು ಶಾಫಿ ತಲೆಮರೆಸಿಕೊಂಡಿದ್ದಾರೆ. ಹೊರ ರಾಜ್ಯಗಳಲ್ಲಿ ಇದ್ದಾರೆ ಎಂಬ ಮಾಹಿತಿ ಇದೆ. ಇವರ ಹುಡುಕಾಟಕ್ಕಾಗಿ ಪೊಲೀಸರ ವಿಶೇಷ ತಂಡ ಮುಂಬೈ ಮತ್ತು ಇತರ ಹೊರ ರಾಜ್ಯಗಳಲ್ಲಿ ಕಾರ್ಯಚರಣೆ ನಡೆಸುತ್ತಿದೆ. ದ.ಕ. ಜಿಲ್ಲಾ ಎಸ್ಪಿ ರಿಷ್ಯಂತ್‌ ನೇತೃತ್ವದಲ್ಲಿ ಬೇರೆ ಬೇರೆ ವಿಶೇಷ ತಂಡಗಳನ್ನು ರಚಿಸಿ ಈ ಪ್ರಕರಣವನ್ನು ಬೇಧೀಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Leave a Reply