ಬೆಂಗಳೂರು : ರಾಜ್ಯಾದ್ಯಂತ ಶೀಘ್ರವೇ 600 ಹೊಸ ಇಂದಿರಾ ಕ್ಯಾಂಟೀನ್ ಆರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬಡವರಿಗೆ ಕಡಿಮೆ ದರಗಳಲ್ಲಿ ಊಟ ತಿಂಡಿ ದೊರೆಯಬೇಕೆನ್ನುವುದು ಇಂದಿರಾ ಕ್ಯಾಂಟೀನ್ ಸ್ಥಾಪನೆಯ ಉದ್ದೇಶವಾಗಿದೆ, ಇದಕ್ಕಾಗಿ 600 ಹೊಸ ಇಂದಿರಾ ಕ್ಯಾಂಟೀನ್ ತಲೆ ಎತ್ತಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಬೆಳಗಿನ ಉಪಾಹಾರ 5 ರೂ. ಮಧ್ಯಾಹ್ನ ಮತ್ತು ರಾತ್ರಿ ಊಟ 10. ರೂ.ಗಳಿಗೆ ದೊರಕಲಿದೆ. ಆಹಾರದ ಮೆನು ಕೂಡ ಬದಲಾಯಿಸಲಾಗಿದೆ. ಕುಳಿತು ತಿನ್ನಲು ಅನುಕೂಲವಾಗಲೆಂದು ಡೈನಿಂಗ್ ಹಾಲ್ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಂಗಳೂರಿನ ಪ್ರತಿ ವಾರ್ಡ್ನಲ್ಲಿ ಹಾಗೂ ರಾಜ್ಯದ ಇತರೆಡೆಗಳಲ್ಲಿ ಕೂಡ ಇಂದಿರಾ ಕ್ಯಾಂಟೀನ್ ಸ್ಥಾಪಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.