
ಬೆಂಗಳೂರು : ರಾಜ್ಯಾದ್ಯಂತ ಇಂದಿನಿಂದ ರಂಜಾನ್ ಉಪವಾಸ ಆರಂಭವಾಗಿದೆ. ಹೀಗಾಗಿ ಪ್ರತಿವರ್ಷದಂತೆ ಉರ್ದು ಭಾಷೆಗಳ ಶಾಲೆಗಳ ವೇಳಾಪಟ್ಟಿಯನ್ನು ಬದಲಿಸಲಾಗಿದ್ದು, ಬೆಳಿಗ್ಗೆ 8 ರಿಂದ ಮಧ್ಯಾಹ್ನ 12:45ರವರೆಗೆ ನಡೆಯಲಿವೆ.



ಒಂದು ತಿಂಗಳು ಕಡಿತವಾಗುವ ಶಾಲಾ ಸಮಯವನ್ನು ಸ್ಪೆಷಲ್ ಕ್ಲಾಸ್ ನಡೆಸುವ ಮೂಲಕ ಸರಿದೂಗಿಸಲು ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ. ಜೊತೆಗೆ ಅನುದಾನಿತ, ಖಾಸಗಿ ಶಾಲೆಗಳಲ್ಲಿರುವ ಮುಸ್ಲಿಂ ವಿದ್ಯಾರ್ಥಿಗಳನ್ನು ಅರ್ಧಗಂಟೆ ಮೊದಲು ಮನೆಗೆ ಬಿಡಲು ಅನುವು ಮಾಡಿಕೊಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.