ಬೆಂಗಳೂರು : ‘ಬಿಗ್ ಬಾಸ್’ ಖ್ಯಾತಿಯ ತುಕಾಲಿ ಸಂತೋಷ್ ಅವರ ಕಾರು ಅಪಘಾತಕ್ಕೀಡಾಗಿದ್ದು, ಆಟೋ ಚಾಲಕ ಮೃತಪಟ್ಟಿದ್ದಾರೆ.
ತುಮಕೂರಿನಲ್ಲಿ ತುಕಾಲಿ ಸಂತೋಷ್ ಅವರ ಕಾರು ಆಟೋಗೆ ಡಿಕ್ಕಿ ಹೊಡೆದಿತ್ತು, ಗಂಭೀರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಜಗದೀಶ್ ಕುಣಿಗಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಆದರೆ ಚಿಕಿತ್ಸೆ ಫಲಿಸದೇ ಆಟೋ ಚಾಲಕ ಮೃತಪಟ್ಟಿದ್ದಾನೆ.
ತುಮಕೂರು ಕಡೆಯಿಂದ ಹೊಳೆನರಸೀಪುರ ಕಡೆಗೆ ತುಕಾಲಿ ಸಂತೋಷ್ ಅವರು ಪತ್ನಿ ಮಾನಸಾ ಜೊತೆ ಪ್ರಯಾಣಿಸುತ್ತಿದ್ದರು. ಅದೇ ವೇಳೆ ಕುಣಿಗಲ್ನಿಂದ ಕುರುಡಿಹಳ್ಳಿಗೆ ಬರುತ್ತಿದ್ದ ಆಟೋ ತುಕಾಲಿ ಸಂತೋಷ್ ಅವರ ಕಾರಿಗೆ ಡಿಕ್ಕಿ ಹೊಡೆದಿದೆ. ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಈ ಬಗ್ಗೆ ಕುಣಿಗಲ್ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.