October 22, 2025
WhatsApp Image 2024-03-15 at 9.13.32 AM

2024ರ ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಕೇಂದ್ರ ಸರ್ಕಾರ ಪೆಟ್ರೋಲ್‌ ಮತ್ತು ಡೀಸೆಲ್‌ ದರವನ್ನು ಪ್ರತಿ ಲೀಟರ್‌ಗೆ 2 ರೂಪಾಯಿ ಇಳಿಕೆ ಮಾಡಿದೆ. ಪರಿಷ್ಕೃತ ದರ ಇಂದು ಬೆಳಗ್ಗೆ 6 ರಿಂದ ದೇಶಾದ್ಯಂತ ಜಾರಿಗೆ ಬರಲಿದೆ.

ಮಹಿಳಾ ದಿನಾಚರಣೆಯಂದು ಪ್ರಧಾನಿ ಮೋದಿ ಎಲ್‌ಪಿಜಿ ಸಿಲಿಂಡರ್‌ ಬೆಲೆ 100 ರೂ.ಕಡಿತ ಮಾಡಿದ್ದರು. ಇದೀಗ ಪೆಟ್ರೋಲ್,ಡೀಸೆಲ್ ಬೆಲೆಯನ್ನೂ ಇಳಿಕೆ ಮಾಡಲಾಗಿದೆ. ಇದೀಗ ಬೆಂಗಳೂರಿನಲ್ಲಿ ಪೆಟ್ರೋಲ್‌ ದರ ಪ್ರತಿ ಲೀಟರ್‌ಗೆ ರೂ.99.94 ಇದೆ.

ಡೀಸೆಲ್‌ ಬೆಲೆ ಪ್ರತಿ ಲೀಟರ್‌ಗೆ 85.89 ಆಗಿದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಬೆಲೆ ಇಳಿಕೆಯ ಬಗ್ಗೆ ಟ್ವೀಟ್​ ಮಾಡಿದ್ದು, ‘ತೈಲ ಮಾರುಕಟ್ಟೆ ದೇಶದಲ್ಲಿ ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆಯನ್ನು ಪರಿಷ್ಕರಿಸುವುದಾಗಿ ತಿಳಿಸಿವೆ.

ನೂತನ ಬೆಲೆ ಮಾರ್ಚ್​ 15, 2024 ಬೆಳಗ್ಗೆ 6 ಗಂಟೆಯಿಂದ ಜಾರಿಗೆ ಬರುತ್ತದೆ. ಬೆಲೆ ಕಡಿತವು ಗ್ರಾಹಕರ ವೆಚ್ಚವನ್ನು ಭರಿಸುತ್ತದೆ. ನಿರ್ವಹಣಾ ವೆಚ್ಚವನ್ನು ಕಡಿಮೆ ಮಾಡುತ್ತದೆ.

ಡಿಸೇಲ್ ಮತ್ತು ಪೆಟ್ರೋಲ್​​ನಲ್ಲಿ ಚಲಿಸುವ 58 ಲಕ್ಷ ಸರಕು ವಾಹನಗಳು, 6 ಕೋಟಿ ಕಾರುಗಳು, 27 ಕೋಟಿ ದ್ವಿಚಕ್ರ ವಾಹನಗಳಿವೆ’ ಎಂದು ಹೇಳಿದೆ.

About The Author

Leave a Reply