
ಬೆಂಗಳೂರು : ಔರಾದ್ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚೌಹಾಣ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.



ಪ್ರಭು ಚೌಹಾಣ್ ಅವರ ಎದೆ ಬಡಿತದಲ್ಲಿ ಏರುಪೇರಾದ ಹಿನ್ನೆಲೆ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮುಂಬೈನ ಬಾಂದ್ರಾದ ಹೋಲಿ ಫ್ಯಾಮಿಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ, ಪ್ರಭು ಚೌಹಾಣ್ ಗೆ ಚಿಕ್ಕದಾದ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ. ಸದ್ಯ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿದೆ.