October 22, 2025
WhatsApp Image 2024-03-15 at 6.45.57 PM

 ರಿಯಲ್ ಎಸ್ಟೇಟ್ ಉದ್ಯಮಿ ಕೃಷ್ಣ ಯಾದವ್ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಉದ್ಯಮಿಯನ್ನು ಕೊಂದ ಆರೋಪಿಯನ್ನು ಯಲಹಂಕ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಾರ್ಚ್ 12ರಂದು ಬಾಗಲೂರು ಕ್ರಾಸ್ ಬಳಿ ಕಾರಿನಲ್ಲಿ ಉದ್ಯಮಿ ಕೃಷ್ಣ ಯಾದವ್ ಶವವಾಗಿ ಪತ್ತೆಯಾಗಿದ್ದರು.

ಕಾರಿನಲ್ಲಿದ್ದ ಶವ ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರಿಗೆ ಉದ್ಯಮಿ ಕೊಲೆಯಾಗಿರುವುದು ತಿಳಿದುಬಂದಿತ್ತು.

ಪ್ರಕರಣ ಸಂಬಂಧ ಸಂತೋಷ್ ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಂದು ಕೃಷ್ಣಯಾದವ್ ಸಂತೋಷ್ ಜೊತೆ ಕಾರಿನಲ್ಲಿ ತೆರಳಿದ್ದರು. ಈ ವೇಳೆ ಸಂತೋಷ್ ಪತ್ನಿ ಹಾಗೂ ಪುತ್ರನ ಬಗ್ಗೆ ಕೃಷ್ಣ ಯಾದವ್ ಕೆಟ್ಟದಾಗಿ ಮಾತನಾಡಿದ್ದರಂತೆ. ಇದೇ ಕಾರಣಕ್ಕೆ ಇಬ್ಬರ ನಡಿವೆ ಜಗಳ ಆರಂಭವಾಗಿದೆ. ಸಂತೋಷ್, ಕಾರಿನಲ್ಲಿದ್ದ ಸ್ಕ್ರೂಡ್ರೈವರ್ ತೆಗೆದುಕೊಂಡು ಕೃಷ್ಣ ಯಾದವ್ ಅವರನ್ನು ಮನಬಂದಂತೆ ಇರಿದು ಕೊಲೆ ಮಾಡಿದ್ದ ಎನ್ನಲಾಗಿದೆ.

ಬಳಿಕ ಕಾರನ್ನು ಬಾಗಲೂರು ಕ್ರಾಸ್ ಬಳಿ ಬಿಟ್ಟು ಎಸ್ಕೇಪ್ ಆಗಿದ್ದ. ಇದೀಗ ಪೊಲೀಸರು ಸಂತೋಷ್ ನನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

About The Author

Leave a Reply