
ಬೆಳ್ತಂಗಡಿ : ಬಸ್ ಕಿಟಕಿಯಿಂದ ಇಳಿಯಲು ಯತ್ನಿಸಿದ ವ್ಯಕ್ತಿಯೊಬ್ಬರು ರಸ್ತೆಗೆ ಬಿದ್ದು ಸಾವನ್ನಪ್ಪಿದ ಘಟನೆ ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ ನಡೆದಿದೆ. ಹುಬ್ಬಳ್ಳಿಯಿಂದ ಮಾ 17 ರಂದು ಬಸ್ಸಿನಲ್ಲಿ ಬಂದಿದ್ದ ಸುಮಾರು 60 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಧರ್ಮಸ್ಥಳ ಬಸ್ ತಂಗುದಾಣದಲ್ಲಿ ಜನ ಹೆಚ್ಚಿದ್ದರಿಂದಾಗಿ ಕಿಟಕಿಯ ಮೂಲಕ ಇಳಿಯಲು ಪ್ರಯತ್ನಿಸಿದ್ದಾರೆ ಈ ವೇಳೆ ಆಯ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ತಲೆಗೆ ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ದದಾಗ ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಬಸ್ ನಿರ್ವಾಹಕ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮೃತ ಅಪರಿಚಿತ ವ್ಯಕ್ತಿಯ ಬಗ್ಗೆ ಹೆಚ್ಚಿನ ಮಾಹಿತಿಗೆ ಧರ್ಮಸ್ಥಳ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಕೋರಲಾಗಿದೆ.


