ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅರೆಸ್ಟ್: ಕಾರಣವೇನು?

ದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನ ಅರೆಸ್ಟ್‌ ಮಾಡಲಾಗಿದೆ. ಅಬಕಾರಿ ನೀತಿ ಹಗರಣದ ತನಿಖೆ ನಡೆಸುತ್ತಿದ್ದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ಕೇಜ್ರಿವಾಲ್ ಬಂಧನಕ್ಕೆ ಕೋರಿದ್ದರು. ಆದರೆ ತಮ್ಮನ್ನು ಬಂಧಿಸದಂತೆ ಇಡಿಗೆ ನಿರ್ದೇಶನ ನೀಡುವಂತೆ ಕೋರಿ ಕೇಜ್ರಿವಾಲ್ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು.

ಅರವಿಂದ್ ಕೇಜ್ರಿವಾಲ್ ಮನವಿ ತಿರಸ್ಕರಿಸಿದ್ದ ದೆಹಲಿ ಹೈಕೋರ್ಟ್, ಅವರನ್ನು ಯಾಕೆ ಬಂಧಿಸಿಲ್ಲ ಅಂತ ಇಡಿ ಅಧಿಕಾರಿಗಳನ್ನು ಪ್ರಶ್ನಿಸಿತ್ತು. ಈ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ನಿವಾಸಕ್ಕೆ ತೆರಳಿದ್ದ ಇಡಿ ಅಧಿಕಾರಿಗಳು, ವಿಚಾರಣೆ ನಡೆಸಿದರು. ಈ ವೇಳೆ ಸಮರ್ಪಕ ಉತ್ತರ ಸಿಗದ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರನ್ನ ಬಂಧಿಸಲಾಗಿದೆ.

ದೆಹಲಿ ಸರ್ಕಾರದ ಮದ್ಯ ನಿಯಮಗಳ ಬದಲಾವಣೆ ಹಿನ್ನೆಲೆಯಲ್ಲಿ ನಡೆದಿದಿಯೆನ್ನಲಾಗಿರುವ ಭ್ರಷ್ಟಾಚಾರ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಬಂಧಿಸಿದ್ದಾರೆ.ಕೇಜ್ರಿವಾಲ್ ನಿವಾಸಕ್ಕೆ ಆಗಮಿಸಿದ ಅಧಿಕಾರಿಗಳು ಸತತ ಮೂರ್ನಾಲ್ಕು ಗಂಟೆಗಳ ವಿಚಾರಣೆಯ ನಂತರ ಅವರನ್ನು ಇ.ಡಿ. ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇನ್ನೂ ಈ ಎಲ್ಲಾ ಪರಿಸ್ಥಿತಿಯನ್ನ ಸೂಕ್ಷ್ಮತೆಯನ್ನು ಅರಿತ ಜಾರಿ ನಿರ್ದೇಶನಾಲಯದ ಅಧಿಕಾರಿಗಳೂ ತಡ ಮಾಡದೇ ಅರೇ ಸೇನಾ ಪಡೆಗಳ ತುಕಡಿಗಳನ್ನು ಸ್ಥಳಕ್ಕೆ ಕರೆಸಿ, ಸಿಎಂ ನಿವಾಸದ ಸುತ್ತ 144 ಸೆಕ್ಷನ್ ಜಾರಿಗೊಳಿ ಭಾರೀ ಬಿಗಿಭದ್ರತೆಯೊಂದಿಗೆ ಕೇಜ್ರಿವಾಲ್ ಅವರನ್ನು ಬಂಧಿಸಲಾಯಿತು.

Leave a Reply