
ಮಗುವನ್ನು ಅಕ್ರಮವಾಗಿ ದತ್ತು ಪಡೆದ ಆರೋಪದ ಅಡಿಯಲ್ಲಿ ರೀಲ್ ಸ್ಟಾರ್, ಬಿಗ್ ಬಾಸ್ ಖ್ಯಾತಿಯ ಸೋನು ಗೌಡ ಅವರನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿರೋದಾಗಿ ತಿಳಿದು ಬಂದಿದೆ.



ಸಾಮಾಜಿಕ ಜಾಲತಾಣಗಳ ಮೂಲಕ ತಾನು 6 ರಿಂದ 8 ವರ್ಷದ ಮಗುವನ್ನು ದತ್ತು ಪಡೆದಿರೋದಾಗಿ ರೀಲ್ ಸ್ಟಾರ್ ಸೋನು ಗೌಡ ಹೇಳಿಕೊಂಡಿದ್ದರು.
ಅವರ ಹೇಳಿಕೆ ವೈರಲ್ ಕೂಡ ಆಗಿತ್ತು.
ಈ ಹಿನ್ನಲೆಯಲ್ಲಿ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ಎಂಬುವರು ಬ್ಯಾಡರಹಳ್ಳಿ ಠಾಣೆಗೆ ರೀಲ್ ಸ್ಟಾರ್ ಸೋನು ಗೌಡ ವಿರುದ್ಧ ದೂರು ನೀಡಿದ್ದರು.
ಈ ದೂರನ್ನು ಆಧರಿಸಿ, ಸೋನು ಗೌಡ ವಿರುದ್ಧ ಜೆ.ಜೆ ಆಯಕ್ಟ್ ಅಡಿಯಲ್ಲಿ ಬ್ಯಾಡರಹಳ್ಳಿ ಠಾಣೆಯ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದರು. ಆ ಬಳಿಕ ಇಂದು ಸೋನು ಗೌಡ ಅವರನ್ನು ಬಂಧಿಸಿರೋದಾಗಿ ತಿಳಿದು ಬಂದಿದೆ.