Visitors have accessed this post 126 times.

ಇಂದಿನಿಂದ ದ್ವಿತೀಯ ಪಿಯುಸಿ ಮೌಲ್ಯಮಾಪನ ಶುರು

Visitors have accessed this post 126 times.

ಬೆಂಗಳೂರು: ಮಾರ್ಚ್ 1ರಿಂದ ಆರಂಭವಾಗಿದ್ದ 2023 -24ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ದು ಶುಕ್ರವಾರ ಮುಕ್ತಾಯವಾಗಿದೆ. ಶನಿವಾರದಿಂದಲೇ ಮೌಲ್ಯಮಾಪನ ಪ್ರಕ್ರಿಯೆ ಆರಂಭಿಸಲಾಗುವುದು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಆದಷ್ಟು ಬೇಗನೆ ಫಲಿತಾಂಶ ನೀಡುವ ಉದ್ದೇಶದಿಂದ ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿ ಮೌಲ್ಯಮಾಪನ ಕಾರ್ಯ ಆರಂಭಿಸಲಿದೆ. ಮಾರ್ಚ್ 1 ರಿಂದ 22 ರವರೆಗೆ ರಾಜ್ಯದಾದ್ಯಂತ 1124 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ. ಇಂದಿನಿಂದ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಲಿದೆ ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *