ಬೆಂಗಳೂರು: ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಪ್ರಕರಮದಲ್ಲಿ ಬಿಗ್ ಬಾಸ್ ಕನ್ನಡ ಖ್ಯಾತಿಯ ಸೋನು ಶ್ರೀನಿವಾಸ ಗೌಡ ಅವರಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ರಾಯಚೂರಿನಲ್ಲಿ ಕುಂಬವೊಂದರಿಂದ ಬಿಗ್ ಬಾಸ್ ಕನ್ನಡ ಖ್ಯಾತಿ ಸೋನು ಶ್ರೀನಿವಾಸಗೌಡ ಅವರು ಹೆಣ್ಣುಮಗುವೊಂದನ್ನು ದತ್ತು ಪಡೆದಿದ್ದರು.
ಆದ್ರೇ ಇದಕ್ಕೆ ಕಾನೂನು ಪಾಲನೆ ಮಾಡಿರಲಿಲ್ಲ. ಹೀಗಾಗಿ ಅವರ ವಿರುದ್ಧ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದಿಂದ ದೂರು ನೀಡಲಾಗಿತ್ತು.
ಪೊಲೀಸರಿಗೆ ನೀಡಿದಂತ ದೂರು ಆಧರಿಸಿ ಅವರನ್ನು ಬಂಧಿಸಲಾಗಿತ್ತು. ಬಂಧನದ ಬಳಿಕ ತಮ್ಮ ವಶಕ್ಕೆ ಪಡೆದಿದ್ದಂತ ಪೊಲೀಸರು ಪ್ರಕರಣ ಸಂಬಂಧ ನಿನ್ನೆ ರಾಯಚೂರಿಗೆ ಕರೆದೊಯ್ದು ಸ್ಥಳ ಮಹಜರು ಕೂಡ ನಡೆಸಿದ್ದರು.
ಇಂದು ಪೊಲೀಸರ ಕಷ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನಲೆಯಲ್ಲಿ ಅವರನ್ನು ಬೆಂಗಳೂರಿನ ಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದಂತ ನ್ಯಾಯಾಲಾಯವು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.