ಮಂಗಳೂರು : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಕೆರೆಗೆ ತಳ್ಳಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ್ದ ಸಂಬಂಧ ಪಟ್ಟಂತೆ ಮೃತರ ಮನೆಗಳಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಮತ್ತು ಯುವ ಉದ್ಯಮಿ ಲತೀಫ್ ಗುರುಪುರ ಭೇಟಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಮತ್ತು ಗೃಹ ಸಚಿವರಲ್ಲಿ ಮಾತನಾಡಿದ್ದೇನೆ. ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.