ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ಪಿಕಪ್ ಢಿಕ್ಕಿ ಹೊಡೆದ ಪರಿಣಾಮ ವಾಹನ ಸವಾರ ಮೃತಪಟ್ಟು, ಸಹ ಸವಾರ ಗಂಭೀರ ಗಾಯಗೊಂಡ ಘಟನೆ ನಗರದ ವಾಣಿ ಕಾಲೇಜು ಸಮೀಪ ನಡೆದಿದೆ.
ಮೃತ ಯುವಕನನ್ನು ಬೆಳ್ತಂಗಡಿ ಲಾಯಿಲ ಗ್ರಾಮದ ರಾಘವೇಂದ್ರ ನಗರ ನಿವಾಸಿ ದಿ. ಜಯರಾಮ ಎಂಬವರ ಪುತ್ರ ಪುರುಷೋತ್ತಮ (19) ಎಂದು ಗುರುತಿಸಲಾಗಿದೆ ರಾಘವೇಂದ್ರ ನಗರ ನಿವಾಸಿ ತೌಸೀಫ್ ಎಂಬವರ ಪುತ್ರ ತೌಫೀಕ್ (18) ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ದ್ವಿಚಕ್ರ ವಾಹನದಲ್ಲಿ ಇಬ್ಬರು ಗುರುವಾಯನಕೆರೆಯಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ವೇಳೆ ಬೆಳ್ತಂಗಡಿ ಕಡೆಯಿಂದ ಗುರುವಾಯನಕೆರೆ ಕಡೆಗೆ ಬರುತ್ತಿದ್ದ ಪಿಕಪ್ ವಾಹನ ಢಿಕ್ಕಿ ಹೊಡೆದು ಪರಾರಿಯಾಗಿದೆ. ಪರಿಣಾಮ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡ ಪುರುಷೋತ್ತಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಘಟನಾ ಸ್ಥಳದಲ್ಲಿ ಪಿಕಪ್ ನ್ನು ನಿಲ್ಲಿಸದೆ ಚಾಲಕ ಪರಾರಿಯಾಗಿದ್ದು ಹುಡುಕಾಟ ನಡೆಸುತ್ತಿದ್ದಾರೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.