October 25, 2025
WhatsApp Image 2024-03-26 at 5.58.31 PM

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರ ಗೆಲುವಿಗೆ ತಯಾರಿ ನಡೆಯುತ್ತಿದೆ.‌ ಎ.3ರಂದು ನಾಮಪತ್ರ ಸಲ್ಲಿಕೆ ನಡೆಯಲಿದೆ. ಪದ್ಮರಾಜ್ ಅವರು ಸುಮಾರು 50 ರಿಂದ 60 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹೇಳಿದ್ದಾರೆ. ಲೋಕಸಭಾ ಚುನಾವಣೆಯ ತಯಾರಿಯ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯ ಬಳಿಕ ಲೋಕಸಭಾ ಚುನಾವಣೆಗೆ ತಯಾರಿ ನಡೆದಿದೆ. ಗ್ಯಾರಂಟಿ ಕಾರ್ಯಕ್ರಮಗಳ ಬಗ್ಗೆ ಬೂತ್ ಮಟ್ಟದ ಕಾರ್ಯಕರ್ತರಿಗೆ ತರಬೇತಿ ನೀಡುವ ಕೆಲಸ ಮಾಡಲಾಗಿದೆ. ಪ್ರತಿ ಬ್ಲಾಕ್ ಮಟ್ಟದಲ್ಲಿ ಕಾರ್ಯಕರ್ತರ ಸಭೆ ನಡೆಯಲಿದೆ. ನಾಮಪತ್ರ ಸಲ್ಲಿಕೆ ದಿನದಂದು ಮಂಗಳೂರು ಪುರಭವನದಲ್ಲಿ ಸಮಾವೇಶ ನಡೆದು, ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಕೆ ಮಾಡಲಾಗುವುದು. ಪಕ್ಷದ ವತಿಯಿಂದ ಪ್ರತಿ ಕ್ಷೇತ್ರದ ಮಾಜಿ ಶಾಸಕರು, ಹಾಲಿ ಶಾಸಕರ ನೇತೃತ್ವದಲ್ಲಿ ಸಮಿತಿ ರಚನೆಯಾಗಿದ್ದು, ಪ್ರಚಾರ ಕಾರ್ಯ ನಡೆಯಲಿದೆ ಎಂದು ವಿವರಿಸಿದರು.

About The Author

Leave a Reply