ಬೆಳ್ತಂಗಡಿ : ಮೂವರು ಬೆಳ್ತಂಗಡಿ ತಾಲೂಕಿನವರು ಕಾರಿನಲ್ಲಿ ತುಮಕೂರಿಗೆ ಹೋಗಿ ಅಲ್ಲಿ ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ವಿಧಾನ ಪರಿಷತ್ ಸದಸ್ಯರುಗಳಾದ ಗೋಪಾಲ ಭಂಡಾರಿ ಹಾಗೂ ಹರೀಶ್ ಕುಮಾರ್ ಇವರನ್ನು ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರಾಧ್ಯಕ್ಷರಾದ ನವಾಝ್ ಕಟ್ಟೆ ಅವರ ಮುಖಂಡರ ನಿಯೋಗ ಭೇಟಿಯಾಗಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಲು ಪೊಲೀಸ್ ಇಲಾಖೆಗೆ ಸೂಚಿಸಲು ಮನವಿ ಮಾಡಿದರು. ಅದಲ್ಲದೆ ಮೃತದೇಹದ ಡಿಎನ್‌ಎ ಪರೀಕ್ಷೆ ಮಾಡಿ ಆದಷ್ಟು ಬೇಗ ಕುಟುಂಬಕ್ಕೆ ಹಸ್ತಾಂತರಿಸುವ ಕ್ರಮ ಕೈಗೊಳ್ಳಲು ಮನವಿ ಮಾಡಿದರು.
ಮಾನ್ಯ ಪರಿಷತ್ ಸದಸ್ಯರು ಪ್ರಕರಣ ಬಗ್ಗೆ ಸೂಕ್ತ ತನಿಖೆ ನಡೆಸಿ ನೊಂದ ಕುಟುಂಬಕ್ಕೆ ನ್ಯಾಯ ಹಾಗೂ ಪರಿಹಾರ ಒದಗಿಸುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಅಭಯ ಚಂದ್ರ ಜೈನ್, ಕಾಂಗ್ರೆಸ್ ಮುಖಂಡರಾದ ರಂಜನ್ ಗೌಡ ಉಪಸ್ಥಿತರಿದ್ದರು.
ವಿಧಾನ ಪರಿಷತ್ ಸದಸ್ಯರ ಭೇಟಿಯಾದ ಎಸ್‌ಡಿಪಿಐ ನಿಯೋಗದಲ್ಲಿ ದ. ಕ ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ, ನಿಸಾರ್ ಕುದ್ರಡ್ಕ, ನಿಜಾಮ್ ಕಟ್ಟೆ ಉಪಸ್ಥಿತರಿದ್ದರು.