October 22, 2025
WhatsApp Image 2024-03-28 at 9.02.17 AM

ಮಂಗಳೂರು: ವಿಶಾಖಪಟ್ಟಣದಿಂದ ಮಂಗಳೂರಿಗೆ ಗಾಂಜಾ ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಖೆಡ್ಡಾಕ್ಕೆ ಕೆಡವಿರುವ ಸಿಸಿಬಿ ಪೊಲೀಸರು 6.325 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ.

ನಗರದ ನೀರುಮಾರ್ಗ ಜಂಕ್ಷನ್, ಬೇಬಿ ಕಾಂಪ್ಲೆಕ್ಸ್ ನಿವಾಸಿ ನಿಶಾಂತ್ ಶೆಟ್ಟಿ(35) ಬಂಧಿತ ಆರೋಪಿ. ಆರೋಪಿ ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಗಾಂಜಾ ಖರೀದಿಸಿ ರೈಲಿನಲ್ಲಿ ಮಂಗಳೂರಿಗೆ ಸಾಗಾಟ ಮಾಡುತ್ತಿದ್ದ. ‌ಬಳಿಕ ಅದನ್ನು ಸಣ್ಣಸಣ್ಣ ಪ್ಯಾಕೆಟ್ ಗಳನ್ನಾಗಿ ಮಾಡಿಕೊಂಡು ಮಂಗಳೂರಿನ ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ.

ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಉಳ್ಳಾಲ ತಾಲೂಕು ತೊಕ್ಕೊಟ್ಟು ಒಳಪೇಟೆಯ ಕೃಷ್ಣನಗರ ಪರಿಸರದಲ್ಲಿ ಗೂಡ್ಸ್ ಟೆಂಪೋವೊಂದರಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದಾಗ ನಿಶಾಂತ್ ಶೆಟ್ಟಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ 1,50,000 ರೂ. ಮೌಲ್ಯದ 6.325 ಕೆಜಿ ಗಾಂಜಾ, ಅಶೋಕ್ ಲೈಲ್ಯಾಂಡ್ ದೋಸ್ತ್ ಗೂಡ್ಸ್ ಟೆಂಪೋ, 2 ಮೊಬೈಲ್, ಡಿಜಿಟಲ್ ತೂಕ ಮಾಪಕ ಹಾಗೂ ಇತರ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 9,11,500 ರೂ. ಆಗಿರಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

About The Author

Leave a Reply