ಮಂಗಳೂರು: ಬೈಕಂಪಾಡಿ ಸೀ ಫುಡ್ ಫ್ಯಾಕ್ಟರಿಗೆ ಆಕಸ್ಮಿಕ ಬೆಂಕಿ..!

ಮಂಗಳೂರು ಹೊರವಲಯದ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಇಂದು(ಗುರುವಾರ) ಬೆಳಿಗ್ಗೆ ಭಾರಿ ಅಗ್ನಿ ಅನಾಹುತ ಸಂಭವಿಸಿದೆ.

ಕೋಳಿ ಆಹಾರಕ್ಕೆ ಬೇಕಾಗಿರುವ ಮೀನು ಪದಾರ್ಥಗಳನ್ನು ಉತ್ಪಾದಿಸುವ ಶಿಹಾರ ಎಂಟರ್ಪ್ರೈಸ್ ನಲ್ಲಿ‌ ಈ ಅಗ್ನಿ ದುರಂತ ಸಂಭವಿಸಿದೆ.

ತಡ ರಾತ್ರಿ ಗೋದಾಮಿನಲ್ಲಿ ಕಾಣಿಸಿಕೊಂಡ ಬೆಂಕಿ ಬಳಿಕ ಕಾರ್ಖಾನೆ ಇಡೀಯ ವ್ಯಾಪಿಸಿದ್ದು ಮಾಹಿತಿ ಪಡೆದ ಅಗ್ನಿ ಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಹತೋಟಿಗೆ ತಂದು ನಂದಿಸಿದ್ದಾರೆ.

ಘಟನೆಯಲ್ಲಿ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ. ಶಾರ್ಟ್ ಸರ್ಕಿಟ್ ದುರಂತಕ್ಕೆ ಕಾರಣವೆಂದು ಶಂಕಿಸಲಾಗಿದ್ದು ಕೋಟ್ಯಾಂತರ ರೂಪಾಯಿಗಳ ನಷ್ಟ ಸಂಭವಸಿದೆ ಎಂದು ಮಾಲಿಕ ಮೊಹಮ್ಮದ್ ತಿಳಿಸಿದ್ದಾರೆ.

Leave a Reply