Visitors have accessed this post 536 times.
ನವದೆಹಲಿ: ಮಾಜಿ ಸಂಸದೆ ಹಾಗೂ ಬಿಜೆಪಿಯಿಂದ ವಿಧಾನಪರಿಷತ್ ಸದಸ್ಯೆಯಾಗಿದ್ದ ತೇಜಸ್ವಿನಿ ಗೌಡ ಅವರು ಬಿಜೆಪಿ ತೊರೆದು ಇದೀಗ ಕಾಂಗ್ರೆಸ್‌ಗೆ ಸೇರ್ಪಡೆ ಆಗಿದ್ದಾರೆ. ಈ ಮೂಲಕ ತಮ್ಮ ಮಾತೃ ಪಕ್ಷಕ್ಕೆ ಮರಳಿದ್ದಾರೆ.
ದೆಹಲಿಯಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾಗಿದ್ದಾರೆ.
ಬಿಜೆಪಿಯಿಂದ ವಿಧಾನ ಪರಿಷತ್ ಸದಸ್ಯೆಯಾಗಿದ್ದ ತೇಜಸ್ವಿನಿ ಗೌಡ ಇತ್ತಿಚೇಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ವಿಧಾನ್ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿ, ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿರುವುದಾಗಿ ಉಲ್ಲೇಖಿಸಿದ್ದರು. ತೇಜಸ್ವಿನಿ ಗೌಡ ಅವರ ಪರಿಷತ್ ಸದಸ್ಯ ಸ್ಥಾನದ ಅವಧಿ ಜೂನ್ 24ರ ವರೆಗೆ ಇತ್ತು.
ತೇಜಸ್ವಿನಿ ಗೌಡ ಬಿಜೆಪಿಯಿಂದ ಮೈಸೂರು ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಅವರಿಗೆ ಟಿಕೆಟ್ ಕೊಟ್ಟಿಲ್ಲ. ಇದರಿಂದ ಅವರು ಅಸಮಾಧಾನಗೊಂಡಿದ್ದರು. ಇದೀಗ ದೆಹಲಿಯಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆ ಆಗಿದ್ದಾರೆ.