ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.


ದೇವಸ್ಥಾನದ ಪ್ರಧಾನ ಅರ್ಚಕ ವಿ.ಎಸ್. ಭಟ್ ಪ್ರಾರ್ಥನೆ ನೆರವೇರಿಸಿ ಪ್ರಸಾದ ನೀಡಿದರು.
ಈ ಸಂದರ್ಭ ಶಾಸಕ ಅಶೋಕ್ ಕುಮಾರ್ ರೈ, ಪುತ್ತೂರು ಚುನಾವಣಾ ಪ್ರಚಾರ ಸಮಿತಿ ಉಸ್ತುವಾರಿ ಕಾವು ಹೇಮನಾಥ ಶೆಟ್ಟಿ, ಜಿಪಂ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ, ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್, ವಿಜಯ್ ಕುಮಾರ್ ಸೊರಕೆ, ಮಹೇಶ್ಚಂದ್ರ ಸಾಲ್ಯಾನ್, ಶ್ರೀಪ್ರಸಾದ್ ಪಾಣಾಜೆ, ಪುಡಾ ಮಾಜಿ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Leave a Reply