Visitors have accessed this post 209 times.

ಮಾಯ್ ದೆ ದೇವುಸ್ ಚರ್ಚ್’ಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

Visitors have accessed this post 209 times.

ಪುತ್ತೂರು: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಸೋಮವಾರ ಪುತ್ತೂರು ಮಯ್ ದೆ ದೇವುಸ್ ಚರ್ಚ್ ಗೆ ಭೇಟಿ ನೀಡಿದರು.

ಚರ್ಚ್ ಧರ್ಮಗುರು ಫಾ. ಲಾರೆನ್ಸ್ ಮಸ್ಕರೇನಸ್ ಪ್ರಾರ್ಥನೆ ಸಲ್ಲಿಸಿ ಮಾತನಾಡುತ್ತಾ, ಪದ್ಮರಾಜ್ ಅವರು ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದು, ಅವರ ಶ್ರಮ ಸಫಲವಾಗಲಿ. ಚುನಾವಣೆಯಲ್ಲಿ ಜಯ ಗಳಿಸಲು ದೇವರ ಅವರನ್ನು ಹರಸಲಿ ಎಂದರು.
ಶಾಸಕ ಅಶೋಕ್ ಕುಮಾರ್ ರೈ, ಪುತ್ತೂರು ಚುನಾವಣಾ ಪ್ರಚಾರ ಸಮಿತಿ ಉಸ್ತುವಾರಿ ಕಾವು ಹೇಮನಾಥ ಶೆಟ್ಟಿ, ಜಿಪಂ ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ, ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್, ವಿಜಯ್ ಕುಮಾರ್ ಸೊರಕೆ, ಮಹೇಶ್ಚಂದ್ರ ಸಾಲ್ಯಾನ್, ಶ್ರೀಪ್ರಸಾದ್ ಪಾಣಾಜೆ, ಪುಡಾ ಮಾಜಿ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *