Visitors have accessed this post 196 times.
ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರನ್ನು ನೇಮಕ ಮಾಡಲಾಗಿದೆ.
ಲೋಕಸಭೆ ಚುನಾವಣೆ ನಡುವಲ್ಲೇ ಎಐಸಿಸಿ ಈ ನಿರ್ಧಾರ ಪ್ರಕಟಿಸಿದೆ. ಲೋಕಸಭೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯಪ್ರಕಾಶ್ ಹೆಗ್ಡೆ ಕಣಕ್ಕಿಳಿದಿದ್ದು ಅವರದೇ ಊರಿನವರು ಮತ್ತು ಸಂಬಂಧಿಕರೂ ಆದ ಕಿಶನ್ ಹೆಗ್ಡೆ ಅವರನ್ನು ಪಕ್ಷದ ಜಿಲ್ಲಾಧ್ಯಕ್ಷರ ಹುದ್ದೆಗೆ ನೇಮಕ ಮಾಡಲಾಗಿದೆ.
ಉಡುಪಿ ಜಿಲ್ಲೆಯ ಐದು ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿಯೇ ಗೆದ್ದುಕೊಂಡಿದ್ದು ಬಿಜೆಪಿ ಪಾಲಿಗೆ ಇಡೀ ಜಿಲ್ಲೆ ಭದ್ರಕೋಟೆಯಂತಿದೆ. ಕಳೆದ ಎರಡು ಅವಧಿಯಲ್ಲಿ ಕಾಂಗ್ರೆಸ್ ಶಾಸಕರೇ ಗೆಲ್ಲದೇ ಇರುವುದರಿಂದ ಪಕ್ಷದಲ್ಲಿ ಕಾರ್ಯಕರ್ತರ ಬಲವೇ ಕುಗ್ಗಿದೆ. ಇಂಥ ಸಂದಿಗ್ಧ ಸ್ಥಿತಿಯಲ್ಲಿ ಕಿಶನ್ ಹೆಗ್ಡೆ ಕೊಳ್ಕೆಬೈಲು ಪಕ್ಷದ ಸಾರಥ್ಯ ವಹಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಪಕ್ಷ ಆಡಳಿತದಲ್ಲಿ ಇರುವುದರಿಂದ ಕಾಂಗ್ರೆಸನ್ನು ಮತ್ತೆ ಅಧಿಕಾರದತ್ತ ಸಾಗಿಸಲು ಅವಕಾಶವೂ ಆಗಲಿದೆ.