
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಇಂದು ಬೆಳಿಗ್ಗೆ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬಳಿಕ ಮೆರವಣಿಗೆಯಲ್ಲಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.



ಅಭ್ಯರ್ಥಿ ಪದ್ಮರಾಜ್ ಆರ್. ಅವರ ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ಹಮ್ಮಿಕೊಂಡ ಮೆರವಣಿಗೆಗೆ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಚಾಲನೆ ನೀಡಿದರು.
ಬುಧವಾರ ಬೆಳಿಗ್ಗೆ ಶರವು ಶ್ರೀ ಮಹಾಗಣಪತಿ ದೇವಸ್ಥಾನ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕಂಕನಾಡಿ ಶ್ರೀ ಬ್ತಹ್ಮಬೈದರ್ಕಳ ಗರೋಡಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಂತರ ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಆಗಮಿಸಿ ವಿಶೇಷ ಅರ್ಚನೆ ಸಲ್ಲಿಸಿದ ಬಳಿಕ ಮೆರವಣಿಗೆಗೆ ಚಾಲನೆ ನೀಡಲಾಯಿತು.
ಗೊಂಬೆ ಬಳಗ, ಚೆಂಡೆ, ಕೊಂಬು ಸಹಿತ ಮೆರವಣಿಗೆಯಲ್ಲಿ ಕಾರ್ಯಕರ್ತರು ಹೆಜ್ಜೆ ಹಾಕಿದರು. ತೆರೆದ ವಾಹನದಲ್ಲಿ ಅಭ್ಯರ್ಥಿ ಪದ್ಮರಾಜ್ ಆರ್.,
ಕಾಂಗ್ರೆಸ್ ಧ್ವಜದೊಂದಿಗೆ ಕಾರ್ಯಕರ್ತರ ಘೋಷಣೆ, ನಡಿಗೆಗೆ ವೇಗ ತುಂಬುವಂತಿತ್ತು.