Visitors have accessed this post 320 times.
ಕಡಬ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಉದನೆ ಎಂಬಲ್ಲಿ ಖಾಸಗಿ ಬಸ್ ಹಾಗೂ ಕಂಟೆನರ್ ನಡುವೆ ಭೀಕರ ಅಪಘಾತ ಸಂಭವಿದೆ. ಅಪಘಾತದಲ್ಲಿ ಹಲವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಹೇಳಲಾಗಿದೆ.
ಮೈಸೂರು ಪಿರಿಯಾಪಟ್ಟಣ ದಿಂದ ಧರ್ಮಸ್ಥಳಕ್ಕೆ ಮದುವೆ ಕಾರ್ಯಕ್ಕೆ ಹೊರಟ ಬಸ್ ಇದಾಗಿದ್ದು ಇನ್ನೊಂದು ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಈ ಅಪಘಾತ ಸಂಭವಿಸಿದೆ. ವರನ ಕಡೆಯವರ ಬಸ್ ಎಂದು ಹೇಳಲಾಗುತ್ತಿದ್ದು ಸ್ಥಳದಲ್ಲಿ ಹಲವು ಮಂದಿ ಸೇರಿದ್ದಾರೆ.ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ ಎಂಬ ಮಾಹಿತಿ ಲಭಿಸಿದೆ. ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ಸ್ಥಳಿಯರೊಂದಿಗೆ ರಕ್ಷಣಾ ಕಾರ್ಯ ನಡೆಯುತ್ತಿದ್ದು ಹೆಚ್ಚಿ ಮಾಹಿತಿ ನೀರೀಕ್ಷಿಸಲಾಗುತ್ತಿದೆ.