Visitors have accessed this post 375 times.
ಸುರತ್ಕಲ್: ದ್ವಿಚಕ್ರ ವಾಹನ ಢಿಕ್ಕಿ ಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಶುಭಗಿರಿ ಬಳಿ ಬುಧವಾರ ರಾತ್ರಿ ವರದಿಯಾಗಿದೆ.
ಮೃತರನ್ನು ಹೊಸಬೆಟ್ಟು ನಿವಾಸಿ ಲಕ್ಷ್ಮೀ ( 69) ಎಂದು ತಿಳಿದು ಬಂದಿದೆ.
ಅಪಘಾತದಲ್ಲಿ ಲಕ್ಷ್ಮೀ ಅವರ ತಲೆ ಮತ್ತು ಕಾಲಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮುಕ್ಕದ ಖಾಸಗಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದು ಬಂದಿದೆ.
ಲಕ್ಷ್ಮೀ ಅವರು ಮಂಗಳೂರು ಕಡೆಯಿಂದ ಬಸ್ ನಲ್ಲಿ ಬಂದು ರಾಷ್ಟ್ರೀಯ ಹೆದ್ದಾರಿ ದಾಟಿ ಉಡುಪಿ ಮಂಗಳೂರು ಹೆದ್ದಾರಿ ದಾಟುತ್ತಿದ್ದ ವೇಳೆ ಉಡುಪಿ ಮೂಲದ ಇಬ್ಬರಿದ್ದ ಬೈಕ್ ಢಿಕ್ಕಿ ಹೊಡೆದಿದೆ.
ಘಟನೆಯಿಂದ ಲಕ್ಷ್ಮೀ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದ ದಾರಿ ಮಧ್ಯೆ ಅವರು ಮೃತಪಟ್ಟರೆಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.