
ರಾಮೇಶ್ವರಂ ಕೆಫೆ ಸ್ಫೋಟಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿಯ ಬಿಜೆಪಿ ಕಾರ್ಯಕರ್ತನನ್ನು ರಾಷ್ಟ್ರೀಯ ತನಿಖಾ ದಳ ವಶಕ್ಕೆ ಪಡೆದಿದೆ.



ಕಳೆದ ವಾರ ತೀರ್ಥಹಳ್ಳಿಯಲ್ಲಿ ಇಬ್ಬರು ಮುಸ್ಲಿಂ ಯುವಕರ ಮನೆ ಹಾಗೂ ಮೊಬೈಲ್ ಅಂಗಡಿ ಮೇಲೆ ದಾಳಿ ನಡೆಸಿ ಶೋಧ ನಡೆಸಿದ್ದರು.
ತನಿಖೆ ವೇಳೆ ಇಬ್ಬರು ಮುಸ್ಲಿಂ ಯುವಕರ ಜೊತೆ ಬಿಜೆಪಿ ಕಾರ್ಯಕರ್ತ ಸಾಯಿ ಪ್ರಸಾದ್ ಸಂಪರ್ಕದಲ್ಲಿದ್ದ ಹಿನ್ನೆಲೆಯಲ್ಲಿ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಇದೀಗ ಬಿಜೆಪಿ ಕಾರ್ಯ ಕರ್ತ ನಾಗಿರುವ ಸಾಯಿಪ್ರಸಾದನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದುಕೊಂಡು ವಿಚಾರಣೆಗೆ ಎಂದು ಕರೆದುಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ. ಕಳೆದ ಬಾರಿ ಅಷ್ಟೇ ಪ್ರಮುಖ ಆರೋಪಿ ಹಾಗು ಬಾಂಬು ತಯಾರಿಕ ಮುಜಾಮಿಲ್ಲನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದರು.