
ಚಾಮರಾಜನಗರ : ಬಟ್ಟೆ ತೊಳೆಯಲು ಹೋಗಿ ಮೂವರು ನೀರುಪಾಲಾದ ಘಟನೆ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.



ಮೃತರನ್ನು ಪುದೂರು ಗ್ರಾಮದ ನಿವಾಸಿ ಮೀನಾ (33) ಪವಿತ್ರ (13) ಕೀರ್ತಿ (12) ಎಂದು ಗುರುತಿಸಲಾಗಿದೆ.
ಇಂದು ಮಧ್ಯಾಹ್ನ ಗೋಪಿನಾಥಂ ಜಲಾಶಯಕ್ಕೆ ಮೂವರು ಬಟ್ಟೆ ತೊಳೆಯಲು ಹೋಗಿದ್ದ ವೇಳೆ ಅವಘಡ ನಡೆದಿದೆ.
ಬಟ್ಟೆ ತೊಳೆಯುತ್ತಿದ್ದ ಮೀನಾ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದರು.
ತಾಯಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದನ್ನು ಕಂಡ ಮಕ್ಕಳು ಸಹಾಯಕ್ಕೆ ಧಾವಿಸಿದ್ದಾರೆ. ನಂತರ ನೀರಿನಿಂದ ಹೊರಗೆ ಬರಲು ಆಗದೇ ಮೂವರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.