Visitors have accessed this post 484 times.
ಬೆಂಗಳೂರು: ನಗರದ ಮೆಡಿಕಲ್ ಕಾಲೇಜಿನ 47 ವಿದ್ಯಾರ್ಥಿನಿಯರ ಏಕಾಏಕಿ ಅಸ್ವಸ್ಥರಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಾಂತಿ-ಭೇದಿಯಿಂದ ತೀವ್ರ ಅಸ್ವಸ್ಥಗೊಂಡಿದ್ದು, 28 ವಿದ್ಯಾರ್ಥಿನಿಯರಿಗೆ ಟ್ರಾಮಾ ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದರೆ, ಐವರಿಗೆ ಹೆಚ್ ಬ್ಲಾಕ್ ಹಾಗೂ ನಾಲ್ವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ.
ಬಿಎಂಸಿ ಹಾಸ್ಟೆಲ್ನಲ್ಲಿದ್ದ ಬೆಂಗಳೂರಲ್ಲಿ ಮೆಡಿಕಲ್ ಕಾಲೇಜು 47 ವಿದ್ಯಾರ್ಥಿನಿಯರು ದಿಢೀರ್ ಅಸ್ವಸ್ಥರಾಗಿದ್ದು, ಆತಂಕಕ್ಕೆ ಕಾರಣವಾಗಿದೆ.
ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಆರೋಗ್ಯ ಉತ್ತಮವಾಗಿದೆ. ವಿದ್ಯಾರ್ಥಿನಿಯರು ಅಸ್ವಸ್ಥಗೊಳ್ಳಲು ಕಾರಣವೇನು ಎಂಬುದರ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಬಿಎಂಸಿಆರ್‌ಐ ಮುಖ್ಯಸ್ಥ ಮತ್ತು ನಿರ್ದೇಶಕ ಡಾ.ರಮೇಶ್ ಕೃಷ್ಣ ತಿಳಿಸಿದ್ದಾರೆ.
ಕೆಲವು ದಿನಗಳ ಹಿಂದೆ ಮಲ್ಲೇಶ್ವರದ ಖಾಸಗಿ ಪಿಜಿಯಲ್ಲಿನ ಯುವತಿಗೆ ಕಾಲರಾ ಇಲ್ಲದಿರುವುದು ದೃಢಪಟ್ಟ ಬೆನ್ನಲ್ಲೇ ಇಷ್ಟು ಮಂದಿ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿಯರೇ ಅತಿಸಾರ ಬೇಧಿಯಿಂದ ಆಸ್ಪತ್ರೆಗೆ ದಾಖಲಾಗಿರುವುದು ತೀವ್ರ ಆತಂಕ ಉಂಟು ಮಾಡಿದೆ. ಕಾಲರಾ ಶಂಕೆಯಿಂದ ರೋಗಿಗಳ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.