
ಉಳ್ಳಾಲ: ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಮಹಾತ್ಮ ಗಾಂಧಿ ರಂಗ ಮಂದಿರ ಬಳಿ ನಡೆದಿದೆ.
ಮೂಲತಃ ತಣ್ಣೀರು ಬಾವಿ ನಿವಾಸಿ ಇದೀಗ ಉಳ್ಳಾಲದಲ್ಲಿರುವ ಮೊಹಮ್ಮದ್ ಜಾವೇದ್ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಈತ ಪಂಜಿಮೊಗೊರು ನಿವಾಸಿ ಗುಜರಿ ವ್ಯಾಪಾರಿ ಹಮೀದ್ ಎಂಬಾತನನ್ನು ಮನೆಗೆ ಕರೆದುಕೊಂಡು ಕೊಲೆ ಯತ್ನ ನಡೆಸಿದ್ದು, ಇದರಿಂದ ಗಂಭೀರ ಗಾಯಗೊಂಡ ಹಮೀದ್ ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.



ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿದ ಆರೋಪಿ ಜಾವೇದ್ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.ಈ ಬಗ್ಗೆ ಹಮೀದ್ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯ ಪತ್ತೆಗಾಗಿ ಬಲೆ ಬೀಸಿದ್ದಾರೆ.