ಸುಳ್ಯ: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ

ಸುಳ್ಯ: ವಿದ್ಯುತ್ ಕಂಬವೊಂದಕ್ಕೆ ಖಾಸಗಿ ಬಸ್ ಢಿಕ್ಕಿ ಹೊಡೆದು, ರಸ್ತೆಗೆ ಅಡ್ಡಲಾಗಿ ಪಲ್ಟಿಯಾದ ಘಟನೆ ಮಡಿಕೇರಿ ಸಮೀಪದ ಜೋಡುಪಾಲದಲ್ಲಿ ಸೋಮವಾರ ಸಂಭವಿಸಿದೆ.ಬೆಂಗಳೂರಿನಿಂದ ಸುಳ್ಯಕ್ಕೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿದ್ದು, ಪಲ್ಟಿಯಾದ ಪರಿಣಾಮ ರಸ್ತೆ ಬ್ಲಾಕ್ ಆಗಿತ್ತು. ಹೀಗಾಗಿ ಸುಳ್ಯದಿಂದ ಮಡಿಕೇರಿ ಕಡೆ ಹೋಗುವ ಪ್ರಯಾಣಿಕರು ಹಾಗೂ ಮಡಿಕೇರಿಯಿಂದ ಸುಳ್ಯ ಕಡೆಗೆ ಬರುವ ಪ್ರಯಾಣಿಕರು ಪರದಾಡುವಂತಾಯಿತು. ಇನ್ನು ಸ್ಥಳಕ್ಕೆ ಮಡಿಕೇರಿ ಪೊಲೀಸ್ ಠಾಣಾ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply