ಪ್ರಸಕ್ತ ಸಾರ್ವತ್ರಿಕ ಲೋಕಸಭಾ ಚುನಾವಣಾ ಕಾರ್ಯ ಹಾಗೂ ಪ್ರಚಾರದಲ್ಲಿ 18 ವರ್ಷಕ್ಕಿಂತ ಕೆಳಗಿನ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿಷೇಧಿಸಿದೆ. ಭಾರತ ಸರ್ಕಾರ ಹಾಗೂ ವಿಶ್ವಸಂಸ್ಥೆಯು ಮಕ್ಕಳ ಹಕ್ಕುಗಳ ಒಡಂಬಡಿಕೆ, 1992 ರ ಡಿಸೆಂಬರ್ 11 ರನ್ವಯ ಒಪ್ಪಿ ಅನುಮೋದಿಸಿದೆ.
ಮಕ್ಕಳ ಹಕ್ಕುಗಳ ಒಡಂಬಡಿಕೆ ಹಾಗೂ ಮಕ್ಕಳ ನ್ಯಾಯ (ಮಕ್ಕಳ ಪೆÇೀಷಣೆ ಮತ್ತು ರಕ್ಷಣೆ ಕಾಯ್ದೆ) 2015ರ ಅನ್ವಯ 18 ವರ್ಷದೊಳಗಿನ ಎಲ್ಲರೂ ಮಕ್ಕಳು ಎಂದು ಪರಿಗಣಿತವಾಗಿದೆ. ಮಕ್ಕಳ ಹಕ್ಕುಗಳ ಒಡಂಬಡಿಕೆಯ ಕಲಂ 32 ಮತ್ತು 36 ರಲ್ಲಿ ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಅಪಾಯಕಾರಿಯಾದ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸದಂತೆ ಹಾಗೂ ಮಕ್ಕಳ ಬೆಳವಣಿಗೆಗೆ ತೊಡಕನ್ನುಂಟು ಮಾಡುವ ಯಾವುದೇ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ನಿರ್ಬಂಧಿಸಿದೆ.
ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗ ಕೂಡ ಚುನಾವಣಾ ಕಾರ್ಯಗಳಲ್ಲಿ ಯಾವುದೇ ಪಕ್ಷಗಳು 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳುವುದನ್ನು ನಿμÉೀಧಿಸಿದೆ. ಒಂದು ವೇಳೆ ಮಕ್ಕಳನ್ನು ಚುನಾವಣಾ ಕಾರ್ಯದಲ್ಲಿ ಬಳಸಿಕೊಂಡಲ್ಲಿ, ಕಾಯ್ದೆಯನ್ವಯ ಸೂಕ್ತ ಕ್ರಮ ಜರುಗಿಸಲಾಗುವುದು.