August 30, 2025
WhatsApp Image 2024-04-11 at 8.50.57 AM

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಸುಳ್ಳು ಸುದ್ದಿ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಹಿಂದೂ ವೋಟ್ ಬೇಡ, ಮುಸ್ಲಿಂ ವೋಟ್ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ ಎಂದು ಸುಳ್ಳು ಸುದ್ದಿ ಪತ್ರಿಕಾ ತುಣುಕು ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಏಳು ಜನರ ವಿರುದ್ಧ ದೂರು ದಾಖಲಾಗಿದೆ.

ಹಿಂದೂ ವೋಟು ಬೇಡ ಎನ್ನುವ ಸುಳ್ಳು ಸುದ್ದಿ ದಿನ ಪತ್ರಿಕೆಯಲ್ಲಿ ಪ್ರಕಟವಾಗಿದೆ ಎಂಬಂತೆ ಪೋಸ್ಟ್‌ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ. ಹೀಗಾಗಿ ಕಾಂಗ್ರೆಸ್ ಈ ಬಗ್ಗೆ ದೂರು ನೀಡಿದೆ. ಈ ದೂರಿನ ಅನ್ವಯ ಸದ್ಯ ಪ್ರಭಾಕರ್, ವಸಂತ ಗಿಳಿಯಾರ್ ಸೇರಿದಂತೆ ಒಟ್ಟು ಏಳು ಜನರ ವಿರುದ್ಧ ದೂರು ದಾಖಲಾಗಿದೆ.

‘ಹಿಂದೂಗಳ ಅಗತ್ಯ ನಮಗೆ ಬೇಡ. ಮುಸ್ಲಿಮರ ಓಟು ಸಾಕು. ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಲು ಬಯಸುತ್ತೇನೆ. ಮುಸ್ಲಿಂರ ಓಲೈಕೆ ಕುರಿತು ಬಿಜೆಪಿಗರ ಟೀಕೆ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ,’ ಎಂದು ಸಿಎಂ ಸಿದ್ದರಾಮಯ್ಯ ಖಾಸಗಿ ಹೋಟೆಲ್ ಒಂದರಲ್ಲಿ ನಡೆದ ಹೋಬಳಿ ಮಟ್ಟದ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಹೇಳಿದ್ದಾರೆ ಎನ್ನುವ ಪತ್ರಿಕಾ ಹೇಳಿಕೆ ರೀತಿಯ ಪೋಸ್ಟರ್‌ ಒಂದನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದು ನಕಲಿ ಎಂಬುದು ಪ್ಯಾಕ್ಟ್‌ಚೆಕ್ ಮೂಲಕ ಗೊತ್ತಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ‘ಹಿಂದೂಗಳ ಅಗತ್ಯ ನಮಗೆ ಬೇಡ. ಮುಸ್ಲಿಮರ ಓಟು ಸಾಕು’ ಎಂಬಂತೆ ಯಾವುದೇ ಪತ್ರಿಕೆಯಲ್ಲಿ ಪ್ರಕಟವಾಗಿಲ್ಲ. ಒಂದು ವೇಳೆ ಸಿದ್ದರಾಮಯ್ಯ ಈ ರೀತಿ ಹೇಳಿದ್ದರೆ ಮಾದ್ಯಮಗಳಲ್ಲಿ ದೊಡ್ಡ ಸುದ್ದಿಯಾಗಬೇಕಿತ್ತು. ಆದರೆ ಯಾವ ವಾಹಿನಿಗಳಲ್ಲೂ ಈ ರೀತಿ ಸುದ್ದಿ ಪ್ರಸಾರವಾಗಿಲ್ಲ.

”ಕಾಂಗ್ರೆಸ್ ಅಥವಾ ಸಿದ್ದರಾಮಯ್ಯನವರು ಹಿಂದುಗಳ ಮತ ಬೇಡ ಎನ್ನಲಿ’ ಎಂಬ ಸವಾಲು ಹಾಕಿರುವ ಸುದ್ದಿಗಳಷ್ಟೇ ಅಂತರ್ಜಾಲದಲ್ಲಿ ಲಭ್ಯವಾಗಿವೆ ಎನ್ನುವುದನ್ನು ‘ಕನ್ನಡ ಫ್ಯಾಕ್ಟ್‌ಚೆಕ್’ ಹೇಳಿದೆ.

ಈ ಕುರಿತಾಗಿ ಸಿಎಂ ಕೂಡ ಸ್ಪಷ್ಟನೆ ನೀಡಿದ್ದಾರೆ. ಜೆಡಿಎಸ್‌ ಮಿತ್ರಮಂಡಳಿ ಕೃಪಾಪೋಷಿತ ಕಿಡಿಗೇಡಿಗಳು ವಾರ್ತಾಪತ್ರಿಕೆಯನ್ನು ಹೋಲುವ ಸುಳ್ಳು ಸುದ್ದಿಯ ತುಣುಕೊಂದನ್ನು ಸೃಷ್ಟಿಸಿದ್ದಾರೆ. ಇದರ ಹಿಂದಿರುವ ದುಷ್ಟ ಶಕ್ತಿ ಯಾವುದು ಎಂದು ನಮಗೆ ತಿಳಿದಿದೆ. ಈ ಬಗ್ಗೆ ಈಗಾಗಲೇ ದೂರು ನೀಡಿದ್ದೇನೆ ಎಂದರು.

About The Author

Leave a Reply