November 8, 2025
WhatsApp Image 2024-04-13 at 12.17.16 PM

ಮಂಗಳೂರು : ಬೆಂಗಳೂರು-ಮಂಗಳೂರು ಮಧ್ಯೆ ಸಂಚರಿಸುವ ರೈಲಿನ ಎಸಿ ಕೋಚ್‌ ನಲ್ಲಿ 3.91 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವ ಬಗ್ಗೆ ವರದಿಯಾಗಿದೆ. ನಗರದ ಜಪ್ಪು ನಿವಾಸಿ 74ರ ಹರೆಯದ ವೃದ್ದೆ, ಅವರ ಪುತ್ರಿ ಮತ್ತು ಇಬ್ಬರು ಮೊಮ್ಮಕ್ಕಳು ಎ.7ರಂದು ಬೆಂಗಳೂರಿನಿಂದ ಮಂಗಳೂರಿಗೆ ರೈಲಿನಲ್ಲಿ ಹೊರಟಿದ್ದು, ಎ.8ರಂದು ಬೆಳಗ್ಗೆ ಮನೆಗೆ ತಲುಪಿದಾಗ ವ್ಯಾನಿಟಿ ಬ್ಯಾಗ್‌ನಲ್ಲಿಟ್ಟಿದ್ದ ಎರಡು ಬಳೆಗಳು, ಸರ ಸಹಿತ 59.885 ಗ್ರಾಂ ಚಿನ್ನಾಭರಣ ಕಳವಾಗಿರುವುದು ಗಮನಕ್ಕೆ ಬಂದಿದೆ ಎಂದು ರೈಲ್ವೆ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

About The Author

Leave a Reply