Visitors have accessed this post 880 times.
ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆಯ ಹೊರಗೆ ಗುಂಡಿನ ದಾಳಿ ನಡೆದಿರುವ ಬಗ್ಗೆ ಮಾಹಿತಿ ಹೊರಬಿದ್ದಿದೆ. ಮುಂಬೈನ ಬಾಂದ್ರಾದಲ್ಲಿರುವ ನಿವಾಸದ ಬಳಿ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
ಭಾನುವಾರ ಮುಂಜಾನೆ 5 ಗಂಟೆ ಸುಮಾರಿಗೆ ನಟ ಸಲ್ಮಾನ್ ಖಾನ್ ಅವರ ಗ್ಯಾಲಕ್ಸಿ ಅಪಾರ್ಟ್‌ಮೆಂಟ್ ನಿವಾಸದ ಹೊರಗೆ ಗುಂಡು ಹಾರಿಸಿದ ಘಟನೆ ನಡೆದಿದೆ.
ಅಪರಿಚಿತರು ನಾಲ್ಕು ಸುತ್ತು ಗುಂಡು ಹಾರಿಸಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ಲಭಿಸಿದೆ.
ವಂಡ್ರೆ ಪೊಲೀಸರು, ಅಪರಾಧ ವಿಭಾಗ ಮತ್ತು ವಿವಿಧ ಪೊಲೀಸ್ ತಂಡಗಳು ಪ್ರಸ್ತುತ ಘಟನೆಯ ಕುರಿತು ತನಿಖೆ ನಡೆಸುತ್ತಿವೆ. ತನಿಖೆಯ ನಂತರ ಹೆಚ್ಚಿನ ಮಾಹಿತಿ ಬಹಿರಂಗಗೊಳ್ಳಲಿದ್ದು, ಸದ್ಯ ಪ್ರಕರಣದ ತನಿಖೆಯನ್ನು ಪೊಲೀಸರು ನಡೆಸುತ್ತಿದ್ದಾರೆ. ಸಲ್ಮಾನ್ ನಿವಾಸದ ಬಳಿ ಭದ್ರತೆ ಹೆಚ್ಚಿಸಲಾಗಿದೆ.