
ವಿಟ್ಲ: ಪುಣಚ ಗ್ರಾಮದ ಬರೆಂಜ – ಕುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 7ಮಂದಿಗೆ ಗಾಯವಾಗಿದೆ.



ಸೇತುವೆಯ ಕೊನೆಯ ಹಂತದ ಕಾರ್ಯವಾಗಿ ಕಾಂಕ್ರೀಟ್ ಮಿಕ್ಸ್ ಹಾಕುತ್ತಿದ್ದ ಸಮಯ ತಳಭಾಗದಿಂದ ನೀಡಿದ ರಾಡ್ ಜಾರಿದ ಹಿನ್ನಲೆಯಲ್ಲಿ ಮೇಲ್ಭಾಗದ ಸಂಪೂರ್ಣ ಕಾಂಕ್ರೀಟ್ ಕುಸಿದು ಬಿದ್ದಿದೆ.
ಸೇತುವೆ ಸಾಮಾಗ್ರಿಯ ನಡುವಿನಲ್ಲಿ ಓರ್ವ ವ್ಯಕ್ತಿ ಸಿಕ್ಕಿ ಹಾಕಿಕೊಂಡಿದ್ದು, ಆರು ಮಂದಿಯನ್ನು ತಕ್ಷಣ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. . ಸ್ಥಳದಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ಕಾರ್ಯಾಚರಣೆಯ ಮೂಲಕ ರಕ್ಷಣೆ ಮಾಡಲಾಗಿದೆ.