
ಬಂಟ್ವಾಳ : ಅಟೋ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಪುದು ಗ್ರಾಮದ ಮಾರಿಪಳ್ಳ ಎಂಬಲ್ಲಿ ಸಂಭವಿಸಿದೆ. ಗಾಯಾಳು ಸ್ಕೂಟರ್ ಸವಾರನನ್ನು ಸಫ್ಘಾನ್ ಎಂದು ಗುರುತಿಸಲಾಗಿದೆ. ಸಫ್ಘಾನ್ ಸ್ಕೂಟರಿನಲ್ಲಿ ಸಹಸವಾರನಾಗಿ ತನ್ನ ಸ್ನೇಹಿತ ಮುಝಮಿಲ್ ಎಂಬಾತನನ್ನು ಕುಳ್ಳಿರಿಸಿಕೊಂಡು ತೆರಳುತ್ತಿದ್ದಾಗ ಮಾರಿಪಳ್ಳ ಎಂಬಲ್ಲಿ ಅಬ್ದುಲ್ ಲತೀಫ್ ಎಂಬವರು ಚಲಾಯಿಸಿಕೊಂಡು ಬಂದ ಅಟೋ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದಿಂದ ಸ್ಕೂಟರ್ ಸಮೇತ ಸವಾರರು ರಸ್ತೆಗೆ ಬಿದ್ದಿದ್ದು, ಸವಾರ ಸಫ್ಘಾನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ಸಫ್ಘಾನ್ ಅವರನ್ನು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿ, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಯುನಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಸಹಸವಾರ ಮುಝಮಿಲ್ ನೀಡಿದ ದೂರಿನಂತೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


