Visitors have accessed this post 432 times.
ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ದ.ಕ. ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಮಂಗಳವಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮತ್ತು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಅವರ ಪಕ್ಷದ ಬಾವುಟ ನೀಡಿ ಅವರನ್ನು ಸ್ವಾಗತಿಸಿದರು.
ಈ ವೇಳೆ ಮಾತನಾಡಿದ ವಿನಯ ಕುಮಾರ್ ಸೊರಕೆ ಅವರು ಮಾತನಾಡಿ, ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಶ್ರಮಿಸುವಂತೆ ಕರೆ ನೀಡಿದರು. ಮುಂದಿನ ದಿನಗಳಲ್ಲಿ ತಾಲೂಕು ಮಟ್ಟದಲ್ಲಿಯೂ ಪಕ್ಷ ಸೇರ್ಪಡೆ ನಡೆಯಲಿದೆ ಎಂದರು.