
ಮಂಗಳೂರು: ಬೈಕ್‌ಗೆ ಕಾರು ಢಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿಯೋರ್ವಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 73ರ ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಎದುರು ನಡೆದಿದೆ. ಬೆಳ್ತಂಗಡಿಯ ನಿವಾಸಿ ಮಹೇಶ್ (20) ಮೃತಪಟ್ಟ ವಿದ್ಯಾರ್ಥಿ ಇವರು ಇನ್ನೋರ್ವ ವಿದ್ಯಾರ್ಥಿ ಪ್ರಣಮ್ ಶೆಟ್ಟಿ ಅವರೊಂದಿಗೆ ಬೈಕ್‌ನಲ್ಲಿ ಟ್ಯೂಷನ್ ತರಗತಿ ಮುಗಿಸಿ ಮನೆಗೆ ತೆರಳುತ್ತಿದ್ದರು. ಈ ವೇಳೆ ಬಿ.ಸಿ.ರೋಡ್ ಕಡೆಯಿಂದ ಬರುತ್ತಿದ್ದ ಕಾರು ಢಿಕ್ಕಿ ಹೊಡೆದ ಪರಿಣಾಮವಾಗಿ ಮಹೇಶ್ ಮೃತಪಟ್ಟು ಪ್ರಣಮ್ ಗಾಯಗೊಂಡಿದ್ದಾರೆ. ಸಹ್ಯಾದ್ರಿ ಕಾಲೇಜು ಎದುರಿನ ಡಿವೈಡರ್ ಬಳಿ ಯು ಟರ್ನ್ ಪಡೆದು ಮುಂದಕ್ಕೆ ಹೋಗುತ್ತಿದ್ದಾಗ ಕಾರು ಢಿಕ್ಕಿ ಹೊಡೆದಿದೆ. ಮಹೇಶ್ ಸಹ್ಯಾದ್ರಿ ಕಾಲೇಜಿನ ರೊಬೊಟಿಕ್ ವಿಭಾಗದ ವಿದ್ಯಾರ್ಥಿಯಾಗಿದ್ದಾರೆ.


