November 8, 2025
WhatsApp Image 2024-04-15 at 2.53.52 PM

ವಿಟ್ಲ: ವಿಟ್ಲದ ಪುಣಚ ಗ್ರಾಮದ ಬರೆಂಜಾ – ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ನಿರ್ಮಾಣ ಹಂತದಲ್ಲಿ ಸೇತುವೆ ಕುಸಿದುಬಿದ್ದ ಅವಘಡದಲ್ಲಿ ಗಾಯಗೊಂಡ ಏಳು ಮಂದಿ ಕಾರ್ಮಿಕರು ಆಸ್ಪತ್ರೆಗಳಲ್ಲಿ ಚೇತರಿಸುತ್ತಿದ್ದಾರೆ. ಇನ್ನೊಂದೆಡೆ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗುತ್ತಿಗೆದಾರ ಕಡಬದ ನಿವಾಸಿ ರಾಜೇಂದ್ರ ಪ್ರಸಾದ್ ಶೆಟ್ಟಿ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯಲ್ಲಿ ಘಟನೆಯಲ್ಲಿ ಗಾಯಗೊಂಡ ಏಳು ಮಂದಿಯ ಪೈಕಿ ಆರು ಮಂದಿಗೆ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಪುತ್ತೂರು ಆಸ್ಪತ್ರೆಯಲ್ಲಿ ಓರ್ವ ಪ್ರಥಮ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾನೆ.

ಮಲ್ಲಿಪ್ಪಾಡಿಯಲ್ಲಿ ಹಾದು ಹೋಗುವ ತೋಡಿಗೆ ಸೇತುವೆ ನಿರ್ಮಾಣ ಕಾರ್ಯ ಸದ್ಯಕ್ಕೆ ಸ್ಥಗಿತಗೊಂಡಿದ್ದು ಕುಸಿದು ಬಿದ್ದ ವಸ್ತುಗಳನ್ನು ತೆರವುಗೊಳಿಸಲಾಗುತ್ತಿದೆ. ಏ. ೧೫ ರಂದು ಸಂಜೆ ಈ ಘಟನೆ ನಡೆದಿದ್ದು, ಸೇತುವೆಯ ಕೊನೆಯ ಕ್ಷಣದ ಸ್ಲ್ಯಾಬ್ ನಿರ್ಮಾಣಕ್ಕಾಗಿ ಕಾಂಕ್ರಿಟ್ ಕಾಮಗಾರಿ ನಡೆಯುತ್ತಿದ್ದ ವೇಳೆ ಈ ಅವಘಡ ನಡೆದಿತ್ತು. ಕಾಂಕ್ರಿಟ್ ಕಾಮಗಾರಿ ಸೇತುವೆ ತಳಭಾಗದಿಂದ ತಾತ್ಕಾಲಿಕವಾಗಿ ಅಳವಡಿಸಿದ್ದ ಕಬ್ಬಿಣದ ರಾಡ್ ಆಕಸ್ಮಿಕವಾಗಿ ಜಾರಿ ಕಬ್ಬಿಣದ ರಾಡ್, ಕಾಂಕ್ರಿಟ್ ಮಿಕ್ಸ್ ಎಲ್ಲವೂ ಕುಸಿದು ಬಿದ್ದು ಕಾರ್ಮಿಕರು ಗಾಯಗೊಂಡಿದ್ದರು.

About The Author

Leave a Reply