ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಬಡ್ಡಕಟ್ಟೆಯಲ್ಲಿ ವ್ಯಕ್ತಿಯೋರ್ವರಿಗೆ ಚೂರಿ ಇರಿದು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಬಂಟ್ವಾಳ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಬಂಧಿತ ಆರೋಪಿ ರವಿ ನಾವೂರು ಎಂದು ಗುರುತಿಸಲಾಗಿದೆ.
ಆತ ಎ. 14ರ ರಾತ್ರಿ ಜಕ್ರಿಬೆಟ್ಟು ನಿವಾಸಿ ಪುಷ್ಪರಾಜ್ ಅವರ ಕುತ್ತಿಗೆಯ ಭಾಗಕ್ಕೆ ಚೂರಿಯಿಂದ ಇರಿದು ಪರಾರಿಯಾಗಿದ್ದ. ಗಂಭೀರ ಗಾಯಗೊಂಡಿದ್ದ ಪುಷ್ಪರಾಜ್ ಅವರು ಪ್ರಸ್ತುತ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆರೋಪಿಯು ಕೃತ್ಯ ನಡೆಸಿದ ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿ ಪರಾರಿಯಾಗಿದ್ದ. ಇವರಿಬ್ಬರ ಮಧ್ಯೆ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಗಲಭೆ ನಡೆದಿತ್ತು ಎಂದು ಗುರುರಾಜ್ ಅವರು ಪೊಲೀಸರಿಗೆ ನೀಡಿದ್ದ ದೂರಿನಲ್ಲಿ ಆರೋಪಿಸಿದ್ದರು.
ಬಂಟ್ವಾಳ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.