February 11, 2026
WhatsApp Image 2024-04-22 at 3.10.56 PM
ಕಾಸರಗೋಡು: ಅತೀ ವೇಗದಿಂದಾಗಿ ಖಾಸಗಿ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿ ಹೊಡೆದ ಘಟನೆ ಕಾಸರಗೋಡು ನಗರ ಹೊರವಲಯದ ವಿದ್ಯಾನಗರದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.ಕಣ್ಣೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಖಾಸಗಿ ಬಸ್ ಮುಂದಿನಿಂದ ಸಾಗುತ್ತಿದ್ದ ಇನ್ನೊಂದು ಬಸ್ಸನ್ನು ಓವರ್ ಟೆಕ್ ಮಾಡುವ ಭರದಲ್ಲಿ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಮಗುಚಿ ಬಿದ್ದಿದೆ. ಬಸ್ಸಿನಲ್ಲಿ ಬೆರಳಣಿಕೆಯಷ್ಟೇ ಪ್ರಯಾಣಿಕರಿದ್ದ ಕಾರಣ ಭಾರೀ ಅನಾಹುತ ತಪ್ಪಿದೆ. ಇನ್ನು ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ನೀಲೇಶ್ವರದ ರೇಶ್ಮಾ, ಪವಿತ್ರ , ಕಲ್ಯೊಟ್ ನ ಕಮಲಾಕ್ಷ, ಪ್ರಭಾಕರ ಮ್ ಪೆರಿಯದ ಗೋಕುಲ್ ರಾಜ್, ಸರಿನಾ, ಮೇಘ, ಕೃಷ್ಣ ಗಾಯಗೊಂಡಿದ್ದು, ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದಾಗಿ ರಸ್ತೆಯಲ್ಲಿ ಸಂಚಾರ ಕೆಲ ಸಮಯ ಅಸ್ತವ್ಯಸ್ಥ ಗೊಂಡಿತ್ತು. ಬಸ್ಸಿನಲ್ಲಿ ಸಿಲುಕಿದ್ದವರನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು, ನಾಗರಿಕರು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಖಾಸಗಿ ಬಸ್ಸುಗಳ ಅತೀವೇಗಕ್ಕೆ ಕಡಿವಾಣ ಹಾಕೇಬೇಕೆಂಬ ಒತ್ತಾಯ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಬಸ್ ಚಾಲಕನ ಅತೀ ವೇಗ ಹಾಗೂ ನಿರ್ಲಕ್ಷದ ಚಾಲನೆ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಇನ್ನು ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

About The Author

Leave a Reply